ನವದೆಹಲಿ: ಕೇಂದ್ರದಲ್ಲಿ 2004 ರಿಂದ 2014ರವರೆಗೆ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ ದೇಶಾದ್ಯಂತ ವಿದ್ಯುತ್ ಒದಗಿಸುವ ಭರವಸೆ ಪೂರೈಸುವಲ್ಲಿ ವಿಫಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ವಿದ್ಯುತ್ ಸಂಪರ್ಕ ಪಡೆದ ಗ್ರಾಮಸ್ಥರೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದ ಪ್ರಧಾನಿ ಮೋದಿ, 2005ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ
2009ರೊಳಗೆ ದೇಶದ ಎಲ್ಲಾ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ 2005ರಲ್ಲಿ ಕಾಂಗ್ರೆಸ್ ಸರಕಾರ ಭರವಸೆ ನೀಡಿತ್ತು. ಆದರೆ ಕೇಂದ್ರದಲ್ಲಿ ದೀರ್ಘಾವಧಿ ಆಡಳಿತ ನಡೆಸಿದರೂ ಅದು ಸಾಧ್ಯವಾಗಲಿಲ್ಲ. ಅಷ್ಟೇ ಈಕೆ ದೇಶಕ್ಕೆ ಸ್ವಾತಂತ್ಯ ಬಂದು 70 ವರ್ಷಗಳಾದರೂ ಹಲವು ಹಳ್ಳಿಗಳು ಇಂದಿಗೂ ಕತ್ತಲೆಯಲ್ಲಿಯೇ ಇವೆ ಎಂದು ಮೋದಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ದೇಶಾದ್ಯಂತ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಆದರೂ ಕಾಂಗ್ರೆಸ್ ಪಕ್ಷ ಎನ್ಡಿಎ ಸರಕಾರದ ಸಾಧನೆಗಳನ್ನು ಪ್ರಶ್ನಿಸುತ್ತಿದೆ ಎಂದು ಮೋದಿ ವಾಗ್ದಾಳಿ ನಡೆಸಿದರು.