Section 144 Imposed in Rajasthan: ದೇಶದ ಕೆಲವು ರಾಜ್ಯಗಳಲ್ಲಿ ಕರೋನಾವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಈ ರಾಜ್ಯಗಳಲ್ಲಿ ಮಹಾರಾಷ್ಟ್ರ, ಪಂಜಾಬ್, ಗುಜರಾತ್ ಮತ್ತು ಕೇರಳ ಮುಂಚೂಣಿಯಲ್ಲಿವೆ. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 39 ಸಾವಿರಕ್ಕೂ ಹೆಚ್ಚು ಕರೋನಾ ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ನಿಯಂತ್ರಿಸಲು ಹಲವು ರಾಜ್ಯಗಳಲ್ಲಿ ಲಾಕ್‌ಡೌನ್, ರಾತ್ರಿ ಕರ್ಫ್ಯೂ ಮತ್ತು ಸೆಕ್ಷನ್ 144 (Section 144) ಅನ್ನು ಜಾರಿಗೆ ತರಲಾಗಿದೆ. ಈ ಮಧ್ಯೆ ರಾಜಸ್ಥಾನ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು ರಾಜಸ್ಥಾನದಲ್ಲಿ (Rajasthan) ಸೆಕ್ಷನ್ 144 ಅನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ - Covid 2nd wave ನಿಯಂತ್ರಿಸಲು ಪೂರ್ವಸಿದ್ಧತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ (Coronavirus) ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನ ಸರ್ಕಾರ ಏಪ್ರಿಲ್ 21 ರವರೆಗೆ ಸೆಕ್ಷನ್ 144ಅನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 22 ರಿಂದ ಏಪ್ರಿಲ್ 21 ರವರೆಗೆ ರಾಜಸ್ಥಾನದಲ್ಲಿ ಕೆಲವು ನಿರ್ಬಂಧಗಳು ಜಾರಿಯಲ್ಲಿರುತ್ತವೆ.
ಇದನ್ನೂ ಓದಿ - Covid-19 ಜಾಸ್ತಿಯಾಗದಂತೆ ಎಚ್ಚರ ವಹಿಸೋಣ: ಸಚಿವ ಎಸ್.ಟಿ. ಸೋಮಶೇಖರ್
ಮಹಾರಾಷ್ಟ್ರದ ಅನೇಕ ನಗರಗಳು ಮತ್ತು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಮತ್ತು ಲಾಕ್‌ಡೌನ್ (Lockdown) ಜಾರಿಗೆ ತರಲಾಗಿದೆ. ಅದೇ ಸಮಯದಲ್ಲಿ, ಪಂಜಾಬ್ನ 9 ನಗರಗಳಲ್ಲಿ ರಾತ್ರಿ ಕರ್ಫ್ಯೂ ಅವಧಿಯನ್ನು 2 ಗಂಟೆಗಳವರೆಗೆ ವಿಸ್ತರಿಸಲಾಗಿದೆ. ಕರೋನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ತಮ್ಮ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ. ಅದೇ ಸಮಯದಲ್ಲಿ, ರಾಜಧಾನಿ ದೆಹಲಿಯಲ್ಲಿ ಕರೋನಾ ಪ್ರಕರಣಗಳು ಮತ್ತೊಮ್ಮೆ ಹೆಚ್ಚುತ್ತಿವೆ, ಈ ಕಾರಣದಿಂದಾಗಿ ಕೇಜ್ರಿವಾಲ್ ಸರ್ಕಾರವೂ ಸಹ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.