ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆ ದುರ್ಬಲಗೊಳಿಸಲು ಯತ್ನಿಸಿದರೆ‌ ದಲಿತರ ದಂಗೆ: ಸಿದ್ದರಾಮಯ್ಯ ವಾರ್ನಿಂಗ್

ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Last Updated : Sep 18, 2019, 02:10 PM IST
ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆ ದುರ್ಬಲಗೊಳಿಸಲು ಯತ್ನಿಸಿದರೆ‌ ದಲಿತರ ದಂಗೆ: ಸಿದ್ದರಾಮಯ್ಯ ವಾರ್ನಿಂಗ್ title=

ಬೆಂಗಳೂರು: ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ರಾಜ್ಯದ ಬಿಜೆಪಿ ಸರ್ಕಾರ ಪ್ರಯತ್ನಿಸಿದರೆ ದಲಿತ ಸಮುದಾಯ ದಂಗೆ ಎದ್ದೀತು ಎಂದು ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ರಾಜ್ಯದ ಬಿಜೆಪಿ ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ" ಎಂದಿದ್ದಾರೆ.

ಅಲ್ಲದೆ, "ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ತಂದು ಅನುದಾನ ಕಡಿತಗೊಳಿಸುವ‌ 
ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ದುಷ್ಟ ಆಲೋಚನೆಯ ವಿರುದ್ಧ 
ಬಿಜೆಪಿ ಶಾಸಕರೂ ಸಹ ದನಿ ಎತ್ತಬೇಕು. ಇಂತಹ ದ್ರೋಹ ಚಿಂತನೆಯನ್ನು ಪಕ್ಷದ ದಾಸ್ಯಕ್ಕೆ ಕಟ್ಟುಬಿದ್ದು ಸಹಿಸಿಕೊಂಡರೆ ಇತಿಹಾಸ ಕ್ಷಮಿಸದು" ಎಂದು ಸಿದ್ದರಾಮಯ್ಯ ಖಾರವಾಗಿ ನುಡಿದಿದ್ದಾರೆ.

ಸರಕಾರದ ಎಲ್ಲಾ 39 ಇಲಾಖೆಗಳಿಗೆ ಹಂಚಿಕೆಯಾಗುವ ವಾರ್ಷಿಕ ಅನುದಾನದಲ್ಲಿ ಶೇ. 24.1 ಮೊತ್ತವನ್ನು ಪರಿಶಿಷ್ಟ ಫಲಾನುಭವಿಗಳಿಗೆ ಮೀಸಲಿಡುವ ಹಾಗೂ ವೆಚ್ಚ ಮಾಡುವುದನ್ನು ಕಡ್ಡಾಯಗೊಳಿಸಿರುವ 'ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆ ಅಧಿನಿಯಮ- 2013' ತಿದ್ದುಪಡಿಗೆ ರಾಜ್ಯ ಸರಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Trending News