Earthquake In J&K: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು

Earthquake In J&K: ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು (National Center for Seismology) ದೃಢಪಡಿಸಿದೆ.

Written by - Yashaswini V | Last Updated : Mar 29, 2022, 10:05 AM IST
  • ಕಣಿವೆ ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ನಡುಗಿದ ಭೂಮಿ
  • ಜಮ್ಮು ಮತ್ತು ಕಾಶ್ಮೀರದ ಅಲ್ಚಿ (ಲೇಹ್) ನ ಉತ್ತರ ಭಾಗದಲ್ಲಿ ಕೆಲವೇ ಸೆಕೆಂಡುಗಳ ಕಾಲ ಭೂಕಂಪದ ಅನುಭವ
  • ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
Earthquake In J&K: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು  title=
Earthquake In Jammu and Kashmir

Earthquake In J&K: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಅಲ್ಚಿ (ಲೇಹ್) ನ ಉತ್ತರ ಭಾಗದಲ್ಲಿ ಭೂಕಂಪದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ (National Center for Seismology) ಪ್ರಕಾರ,  ಬೆಳಿಗ್ಗೆ 7:29 ರ ಸುಮಾರಿಗೆ ಈ ಭಾಗದಲ್ಲಿ ಭೂಕಂಪದ ಅನುಭವವಾಗಿದೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಅಲ್ಚಿ (ಲೇಹ್) ನ ಉತ್ತರ ಭಾಗದಲ್ಲಿ ಕೆಲವೇ ಸೆಕೆಂಡುಗಳ ಕಾಲ ಭೂಕಂಪದ (Earthquake) ಅನುಭವವಾಗಿದ್ದು, ಜನರು ತಕ್ಷಣ ಹೊರಗೆ ಬಂದಿದ್ದಾರೆ. ಆದರೆ, ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 

ಇದನ್ನೂ ಓದಿ- Gas Pipelineಗೆ ಸಂಬಂಧಿಸಿದಂತೆ ದೇಶದ ನಾಗರಿಕರಿಗೆ Modi ಸರ್ಕಾರದ Good News

ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಭೂಕಂಪ ಸಂಭವಿಸಿದ್ದು, ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು (National Center for Seismology) ದೃಢಪಡಿಸಿದೆ.

ಇದನ್ನೂ ಓದಿ- Saving Account Interest Rate: ಈ ಬ್ಯಾಂಕ್ ಗ್ರಾಹಕರಿಗೆ ಭರ್ಜರಿ ಗಿಫ್ಟ್..!

ಭೂಕಂಪದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದುವನ್ನು ಅಲ್ಚಿಯಿಂದ 186 ಕಿಮೀ ಉತ್ತರಕ್ಕೆ ಅಂದರೆ ಚೀನಾದಲ್ಲಿ ಎಂದು ಹೇಳಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News