ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಸೇರಿದಂತೆ 3 ಭಯೋತ್ಪಾದಕರ ಹತ್ಯೆ

ಉತ್ತರ ಕಾಶ್ಮೀರದ ಹಂಡ್ವಾರಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮುಖಾಮುಖಿಯಾಗಿದ್ದು, ಇದರಲ್ಲಿ ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಗಳಿಂದ ಹತರಾಗಿದ್ದಾರೆ. ಇದಕ್ಕೂ ಮೊದಲು ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು.

Last Updated : Aug 20, 2020, 06:41 AM IST
  • ಕುಪ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೈಬಾ ಕಮಾಂಡರ್ ನಾಸಿರುದ್ದೀನ್ ಲೋನ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
  • ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬರು ನಸೀರುದ್ದೀನ್ ಲೋನ್
  • ಈ ವರ್ಷದ ಆರಂಭದಲ್ಲಿ 6 ಸಿಆರ್‌ಪಿಎಫ್ (CRPF) ಸಿಬ್ಬಂದಿಯ ಹತ್ಯೆಯಲ್ಲಿ ಲೋನ್ ಭಾಗಿಯಾಗಿದ್ದ.
ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಸೇರಿದಂತೆ 3 ಭಯೋತ್ಪಾದಕರ ಹತ್ಯೆ title=

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೈಬಾ (Lashkar-e-Taiba) ಕಮಾಂಡರ್ ಸೇರಿದಂತೆ ಮೂವರು ಉಗ್ರರು ಹತರಾಗಿದ್ದಾರೆ. ಶೋಪಿಯಾನ್‌ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೇ ಸಮಯದಲ್ಲಿ ಕುಪ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೈಬಾ ಕಮಾಂಡರ್ ನಾಸಿರುದ್ದೀನ್ ಲೋನ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ವರ್ಷದ ಆರಂಭದಲ್ಲಿ 6 ಸಿಆರ್‌ಪಿಎಫ್ (CRPF) ಸಿಬ್ಬಂದಿಯ ಹತ್ಯೆಯಲ್ಲಿ ಲೋನ್ ಭಾಗಿಯಾಗಿದ್ದ.

ಶೋಪಿಯಾನ್‌ನ ಚಿಟಗಂ ಗ್ರಾಮದಲ್ಲಿ ಉಗ್ರರನ್ನು ಅಡಗಿಸಿಟ್ಟಿರುವ ಬಗ್ಗೆ ಗೌಪ್ಯ ಮಾಹಿತಿ ದೊರೆತಿದ್ದು, ಅದರ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಮುತ್ತಿಗೆ ಮತ್ತು ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರು ಗುಂಡುಗಳನ್ನು ಹಾರಿಸಲು ಪ್ರಾರಂಭಿಸಿದರು, ನಂತರ ಎನ್‌ಕೌಂಟರ್‌ ಪ್ರಾರಂಭವಾಯಿತು.

ಪ್ರತೀಕಾರದ ಗುಂಡಿನ ದಾಳಿಯಲ್ಲಿ ಓರ್ವ ಭಯೋತ್ಪಾದಕ ಸಾವನ್ನಪ್ಪಿದ್ದಾನೆ. ಭಯೋತ್ಪಾದಕ ಮತ್ತು ಸಂಘಟನೆಯ ಗುರುತು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

3 ವರ್ಷಗಳಲ್ಲಿ 15 ದೇಶಗಳಿಗೆ ಭೇಟಿ ನೀಡಿದ್ದ ವಿಕಾಸ್ ದುಬೆ

ಕಾರ್ಯಾಚರಣೆ ಮುಗಿದಿದೆ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ. ಎನ್‌ಕೌಂಟರ್ (Encounter) ಸ್ಥಳದಿಂದ ಪಿಸ್ತೂಲ್, ಆರು ಗುಂಡುಗಳು, ಯುಬಿಜಿಎಲ್, ನಾಲ್ಕು ಚೀನೀ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ಥಳದಲ್ಲೇ ನಾಶಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಏತನ್ಮಧ್ಯೆ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂಡ್ವಾರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೊಂದು ಮುಖಾಮುಖಿ ನಡೆಯಿತು.

ಹಂದ್ವರದ ಗಣಿಪೋರಾ ಕ್ರಾಲ್‌ಗುಂಡ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಅದರಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬರು ನಸೀರುದ್ದೀನ್ ಲೋನ್, ಏಪ್ರಿಲ್ 18 ರಂದು ಸೊಪೋರ್ನಲ್ಲಿ ಮೂವರು ಸಿಆರ್ಪಿಎಫ್ ಸಿಬ್ಬಂದಿಯನ್ನು ಮತ್ತು ಮೇ 4 ರಂದು ಹಂಡ್ವಾರಾದಲ್ಲಿ ಅದೇ ಸಂಖ್ಯೆಯ ಸಿಆರ್ಪಿಎಫ್ ಸಿಬ್ಬಂದಿಯನ್ನು ಹತ್ಯೆಗೈದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದ್ದಾರೆ.
 

Trending News