ನವದೆಹಲಿ: ದಕ್ಷಿಣ ಕಾಶ್ಮೀರದ ಬಿಜ್ಬೆಹರಾದ ವಾಘಮಾ ಗ್ರಾಮದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮುಖಾಮುಖಿ ಆರಂಭವಾಗಿದೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅನಂತ್‌ನಾಗ್ (Anantnag)ನ ವಾಗಾ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಜೆಕೆಪಿ ಮತ್ತು ಭದ್ರತಾ ಪಡೆಗಳು ಸ್ಥಳದಲ್ಲೇ ಇವೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು 3 ಆರ್‌ಆರ್ ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ತಂಡವು ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಹೇಳಿದರು. ಭದ್ರತಾ ಪಡೆಗಳ ಜಂಟಿ ತಂಡವು ಅನುಮಾನಾಸ್ಪದ ಸ್ಥಳವನ್ನು ಸುತ್ತುವರೆದಿದ್ದರಿಂದ, ಗುಪ್ತ ಭಯೋತ್ಪಾದಕರು ಭದ್ರತಾ ಪಡೆ ಮೇಲೆ ಗುಂಡು ಹಾರಿಸಿದರು, ನಂತರ ಎನ್ಕೌಂಟರ್ ಪ್ರಾರಂಭವಾಯಿತು ಎಂದವರು ತಿಳಿಸಿದ್ದಾರೆ.
ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಮುಖಾಮುಖಿಯನ್ನು ಕಾಶ್ಮೀರ ಪೊಲೀಸರು ಖಚಿತಪಡಿಸಿದ್ದಾರೆ.
ಜೂನ್ ತಿಂಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ಇದು 14 ನೇ ಎನ್‌ಕೌಂಟರ್ (Encounter) ಆಗಿದ್ದು, ಇದುವರೆಗೆ 38 ಭಯೋತ್ಪಾದಕರು ಹತರಾಗಿದ್ದಾರೆ. ಕಾಶ್ಮೀರದಲ್ಲಿ ಭಯೋತ್ಪಾದನೆ ಪ್ರಾರಂಭವಾದಾಗಿನಿಂದ ಈ ವರ್ಷದ ಜೂನ್ ತಿಂಗಳಲ್ಲಿ ಗರಿಷ್ಠ ಸಂಖ್ಯೆಯ ಭಯೋತ್ಪಾದಕರು ಹತರಾಗಿದ್ದಾರೆ. ಈ ವರ್ಷ ಇಲ್ಲಿಯವರೆಗೆ ಕೊಲ್ಲಲ್ಪಟ್ಟ ಒಟ್ಟು ಭಯೋತ್ಪಾದಕರ ಸಂಖ್ಯೆ 118 ಆಗಿದೆ.