ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಗಂತದ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್, ಶ್ರುತಿ ಇರಾನಿ, ಯುಪಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ 674 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಸುಮಾರು 9 ಕೋಟಿ ಮತದಾರರರು ಮತದಾನಕ್ಕೆ ಅರ್ಹರಾಗಿದ್ದಾರೆ. ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.
Jammu and Kashmir: Visuals from polling booth 66 in Govt High School in Pulwama( Anantnag Lok Sabha seat) #LokSabhaElections2019 pic.twitter.com/EKLbGTmkX3
— ANI (@ANI) May 6, 2019
ಮತದಾನ ಆರಂಭಕ್ಕೂ ಮುನ್ನ, ಜನತೆ ಅತಿ ಹೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಭಾರತದ ಉತ್ತಮ ಭವಿಷ್ಯಕ್ಕಾಗಿ ಮತದಾನ ಮಾಡುವುದು ಅತ್ಯಂತ ಪರಿಣಾಮಕಾರಿ ಮಾರ್ಗ. ಐದನೇ ಹಂತದಲ್ಲಿ ಯುವ ಮತದಾರರೂ ಸಹ ಅತಿ ಹೆಚ್ಚು ಸಂಖ್ಯೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದು ನಾನು ಭಾವಿಸುತ್ತೇನೆ" ಎಂದು ಮೋದಿ ಬರೆದಿದ್ದಾರೆ.
Requesting all those voting in today’s fifth phase of the 2019 Lok Sabha elections to do so in large numbers.
A vote is the most effective way to enrich our democracy and contribute to India’s better future.
I hope my young friends turnout in record numbers.
— Chowkidar Narendra Modi (@narendramodi) May 6, 2019
ಉತ್ತರ ಪ್ರದೇಶದ 14 ಕ್ಷೇತ್ರ, ರಾಜಸ್ತಾನದ 12, ಪಶ್ಚಿಮ ಬಂಗಾಳ , ಮಧ್ಯಪ್ರದೇಶದಲ್ಲಿ ತಲಾ ಏಳು ಹಾಗೂ ಬಿಹಾರದಲ್ಲಿನ 5, ಜಾರ್ಖಂಡ್ ನಲ್ಲಿನ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಲಡಾಖ್ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.