ಗಾಂಧಿ ಕುಟುಂಬ ಯಾರಿಗೂ ಬೆಂಬಲಿಸಿಲ್ಲ- ಖರ್ಗೆ ಸ್ಪಷ್ಟನೆ

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಶಶಿ ತರೂರ್ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸ್ಪರ್ಧಿಸುತ್ತಿರುವ ಸಂದರ್ಭದಲ್ಲಿ ಅವರು ಗಾಂಧಿ ಕುಟುಂಬ ಯಾವ ಅಭ್ಯರ್ಥಿಯನ್ನು ಬೆಂಬಲಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Last Updated : Sep 30, 2022, 06:21 PM IST
  • ಗಾಂಧಿ ಕುಟುಂಬವು ಕಾಂಗ್ರೆಸ್ ಪಕ್ಷವು ತನ್ನ ಹಿಡಿತದಲ್ಲಿರಲು ಖರ್ಗೆ ಅವರನ್ನು ಕಣಕ್ಕೆ ಇಳಿಸಲಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಈಗ ಅವರು ಈ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಗಾಂಧಿ ಕುಟುಂಬ ಯಾರಿಗೂ ಬೆಂಬಲಿಸಿಲ್ಲ- ಖರ್ಗೆ ಸ್ಪಷ್ಟನೆ  title=

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಶಶಿ ತರೂರ್ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸ್ಪರ್ಧಿಸುತ್ತಿರುವ ಸಂದರ್ಭದಲ್ಲಿ ಅವರು ಗಾಂಧಿ ಕುಟುಂಬ ಯಾವ ಅಭ್ಯರ್ಥಿಯನ್ನು ಬೆಂಬಲಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ, ಹೈಕಮಾಂಡ್ ಕೂಡ ಇಲ್ಲ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದ್ದಾರೆ.ಗಾಂಧಿಗಳು ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆಯೇ ಎಂದು ಹೇಳಲು ಸಾಧ್ಯವಿಲ್ಲ" ಎಂದು ಅವರು ಹೇಳಿದರು.

ಗಾಂಧಿ ಕುಟುಂಬವು ಕಾಂಗ್ರೆಸ್ ಪಕ್ಷವು ತನ್ನ ಹಿಡಿತದಲ್ಲಿರಲು ಖರ್ಗೆ ಅವರನ್ನು ಕಣಕ್ಕೆ ಇಳಿಸಲಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಈಗ ಅವರು ಈ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಹುಡುಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಯುವತಿಗೆ ಪುಂಡರ ಕಿರಿಕ್

ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಹಿರಿಯ ನಾಯಕ ಖರ್ಗೆ ಅವರಿಗೆ ಮಾಜಿ ಮುಖ್ಯಮಂತ್ರಿಗಳಾದ ಭೂಪಿಂದರ್ ಸಿಂಗ್ ಹೂಡಾ, ದಿಗ್ವಿಜಯ ಸಿಂಗ್, ಮತ್ತು ಪೃಥ್ವಿರಾಜ್ ಚವಾಣ್, ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ, ವಕ್ತಾರ ಎ.ಎಂ.ಸಿಂಘ್ವಿ, ಮಾಜಿ ಕೇಂದ್ರ ಸಚಿವ ಅಜಯ್ ಮಾಕೆನ್ ಸೇರಿದಂತೆ ಹಲವು ಪ್ರಮುಖ ನಾಯಕರು ಸಾಥ್ ನೀಡಿದರು.

ಇನ್ನೊಂದೆಡೆಗೆ ಶಶಿ ತರೂರ್ ಕೂಡ ಇಂದು ಮಧ್ಯಾಹ್ನ ಮೂರು ಗಂಟೆ ಗಡುವಿಗೆ ಮೊದಲು ನಾಮಪತ್ರ ಸಲ್ಲಿಸಿದರು. ಖರ್ಗೆ ಕಾಂಗ್ರೆಸ್ ಪಕ್ಷದ ಭೀಷ್ಮ ಪಿತಾಮಹ ಇದ್ದಂತೆ ಆದಾಗ್ಯೂ ಕೂಡ ಹೊಸ ಮುಖಗಳಿಗೆ ನಿರಾಸೆ ಮಾಡದಿರಲು ತಾವು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಹೇಳಿದರು.

ಅಚ್ಚರಿ ಎನ್ನುವಂತೆ ಮೂರನೇ ಅಭ್ಯರ್ಥಿಯಾಗಿರುವ ಜಾರ್ಖಂಡ್‌ನ ಮಾಜಿ ಸಚಿವ ಕೆಎನ್‌ ತ್ರಿಪಾಠಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಸಿದ ದಿಗ್ವಿಜಯ ಸಿಂಗ್ ಅವರು ಇಂದು ಬೆಳಗ್ಗೆ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಸ್ಪರ್ಧೆಯಿಂದ ಹಿಂದೆ ಸರಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News