Daily GK Quiz: 'ದಕ್ಷಿಣ ಭಾರತದ ಮ್ಯಾಂಚೆಸ್ಟರ್' ಎಂದು ಯಾವ ನಗರವನ್ನು ಕರೆಯಲಾಗುತ್ತದೆ?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Nov 13, 2024, 06:23 PM IST
  • ಗುರುತ್ವಾಕರ್ಷಣೆಯ ನಿಯಮವನ್ನು ಕಂಡುಹಿಡಿದ ವಿಜ್ಞಾನಿ ಯಾರು?
  • ವಿಶ್ವದ ಅತ್ಯಂತ ದೊಡ್ಡ ಲಿಖಿತ ಸಂವಿಧಾನವನ್ನು ಹೊಂದಿರುವ ದೇಶ ಯಾವುದು?
  • ವಿಶ್ವ ಭೂ ದಿನವನ್ನು ಪ್ರತಿ ವರ್ಷ ಯಾವ ದಿನದಂದು ಆಚರಿಸಲಾಗುತ್ತದೆ?
Daily GK Quiz: 'ದಕ್ಷಿಣ ಭಾರತದ ಮ್ಯಾಂಚೆಸ್ಟರ್' ಎಂದು ಯಾವ ನಗರವನ್ನು ಕರೆಯಲಾಗುತ್ತದೆ? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಗುರುತ್ವಾಕರ್ಷಣೆಯ ನಿಯಮವನ್ನು ಕಂಡುಹಿಡಿದ ವಿಜ್ಞಾನಿ ಯಾರು?

ಉತ್ತರ: ಸರ್ ಐಸಾಕ್ ನ್ಯೂಟನ್

ಪ್ರಶ್ನೆ 2: ವಿದ್ಯುತ್ ಬಲ್ಬ್ ಅನ್ನು ಕಂಡುಹಿಡಿದವ ವಿಜ್ಞಾನಿ ಯಾರು?

ಉತ್ತರ: ಥಾಮಸ್ ಅಲ್ವಾ ಎಡಿಸನ್

ಪ್ರಶ್ನೆ 3: ಅಮೆರಿಕ ಸಂಯುಕ್ತ ಸಂಸ್ಥಾನದ ಮೊದಲ ಅಧ್ಯಕ್ಷರು ಯಾರು?

ಉತ್ತರ: ಜಾರ್ಜ್ ವಾಷಿಂಗ್ಟನ್

ಪ್ರಶ್ನೆ 4: ವಿಶ್ವದ ಅತ್ಯಂತ ದೊಡ್ಡ ಲಿಖಿತ ಸಂವಿಧಾನವನ್ನು ಹೊಂದಿರುವ ದೇಶ ಯಾವುದು?\

ಉತ್ತರ: ಭಾರತ

ಪ್ರಶ್ನೆ 5: ಯಾವ ದೇಶವು 1886ರಲ್ಲಿ ಅಮೆರಿಕಕ್ಕೆ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ಯನ್ನು ಉಡುಗೊರೆಯಾಗಿ ನೀಡಿತು?

ಉತ್ತರ: ಫ್ರಾನ್ಸ್

ಇದನ್ನೂ ಓದಿ: ಮದುವೆಯಾದವರಿಗೆ ಈ ಡೇಂಜರಸ್ ರೋಗ ಬರುವ ಸಾಧ್ಯತೆ ತುಂಬಾ ಕಡಿಮೆ! ಸರಿಯಾದ ವಯಸ್ಸಿಗೆ ಮದುವೆಯಾಗಿ, ಜಬರ್ದಸ್ತಾಗಿರಿ! 

ಪ್ರಶ್ನೆ 6: ವಿಶ್ವ ಭೂ ದಿನವನ್ನು ಪ್ರತಿ ವರ್ಷ ಯಾವ ದಿನದಂದು ಆಚರಿಸಲಾಗುತ್ತದೆ?

ಉತ್ತರ: ಏಪ್ರಿಲ್ 22 

ಪ್ರಶ್ನೆ 7: ಹಿಂದೂ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರ ನಿಜವಾದ ಹೆಸರೇನು?

ಉತ್ತರ: ನರೇಂದ್ರನಾಥ ದತ್ತಾ

ಪ್ರಶ್ನೆ 8: ವಿಸ್ತೀರ್ಣದಲ್ಲಿ ಭಾರತದ ಅತಿ ದೊಡ್ಡ ಜಿಲ್ಲೆ ಯಾವುದು?

ಉತ್ತರ: ಕಚ್, ಗುಜರಾತ್

ಪ್ರಶ್ನೆ 9: “ದಕ್ಷಿಣ ಭಾರತದ ಮ್ಯಾಂಚೆಸ್ಟರ್” ಎಂದು ಯಾವ ನಗರವನ್ನು ಕರೆಯಲಾಗುತ್ತದೆ?

ಉತ್ತರ: ಕೊಯಮತ್ತೂರು

ಪ್ರಶ್ನೆ 10: ಭಾರತದಲ್ಲಿ ಯಾವ ಕೋಟೆಯನ್ನು ಚಿನ್ನದ ಕೋಟೆ ಎಂದು ಕರೆಯಲಾಗುತ್ತದೆ?

ಉತ್ತರ: ಜೈಸಲ್ಮೇರ್ ಕೋಟೆ, ರಾಜಸ್ಥಾನ

ಇದನ್ನೂ ಓದಿ: ಐರನ್ ಕೊರತೆ ಎದುರಾದಾಗ ಈ ಜ್ಯೂಸ್ ಸೇವಿಸಿ ! ಮತ್ತೆ ನಾರ್ಮಲ್ ಸ್ಥಿತಿಗೆ ಬರುತ್ತದೆ ಹಿಮೊಗ್ಲೋಬಿನ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News