ನವದೆಹಲಿ: ಮುಂದಿನ 48 ಗಂಟೆಗಳಲ್ಲಿ ತಮಿಳುನಾಡು ಮತ್ತು ಪುದುಚೇರಿ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾರದ ಪ್ರಾರಂಭದಲ್ಲಿ ಸಾಮಾನ್ಯವಾಗಿದ್ದ ಸಮುದ್ರದ ಅಲೆಗಳು ಬುಧವಾರ ಏಕಾಏಕಿ ಬದಲಾಗಿದ್ದು, ತಮಿಳುನಾಡಿಗೆ 'ಫ್ಯಾನಿ' ಚಂಡಮಾರುತ ಅಪ್ಪಳಿಸಲಿದ್ದು, ದಕ್ಷಿಣ ಭಾರತದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಭಾರತದ ದಕ್ಷಿಣದ ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಇದರ ಪರಿಣಾಮ ಗೋಚರಿಸಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಇನ್ನೆರಡು ದಿನಗಳ ಬಳಿಕ ತಮಿಳುನಾಡಿನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರ ಪ್ರದೇಶದ ಕೆಲ ಭಾಗಗಳಲ್ಲೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅದೇ ಸಮಯದಲ್ಲಿ, ಗುರುವಾರ ದೆಹಲಿಯಲ್ಲಿ ಗುಡುಗು, ಮಿಂಚಿನ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಭವಿಷ್ಯ ನುಡಿದಿದ್ದಾರೆ. ನಗರದ ಕನಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ದಿನದ ಗರಿಷ್ಟ ಸಮಯ 42 ಡಿಗ್ರಿ ಸೆಲ್ಷಿಯಸ್ ಇದೆ. ಬೆಳಿಗ್ಗೆ, 58 ಪ್ರತಿಶತ ಆರ್ದ್ರತೆ ದಾಖಲಾಗಿದೆ.