ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಬ್ರಿಜ್ಭೂಷಣ್ರನ್ನು ಬಂಧಿಸದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ತಾವು ಗೆದ್ದ ಪದಕಗಳನ್ನು ಮಂಗಳವಾರ ಗಂಗಾ ನದಿಗೆ ಎಸೆಯಲು ಮುಂದಾಗಿದ್ದರು. ಇದೀಗ ಇದೇ ವಿಚಾರವಾಗಿ ಬ್ರಿಜ್ ಭೂಷನ್ ಮಾತನಾಡಿದ್ದಾರೆ.
ಕುಸ್ತಿಪಟುಗಳು ಗಂಗಾ ನದಿಗೆ ತಮ್ಮ ಪದಕಗಳನ್ನು ಎಸೆಯುವುದರಿಂದ ನ್ಯಾಯಾಲಯ ನನ್ನನ್ನು ನೇಣಿಗೆ ಹಾಕುವುದಿಲ್ಲ. ಇದರಿಂದ ನನಗೆ ಗಲ್ಲು ಶಿಕ್ಷೆಯಾಗುವುದಿಲ್ಲ, ನನ್ನ ವಿರುದ್ಧ ಅವರು ಸಾಕ್ಷ್ಯಗಳನ್ನು ಸಲ್ಲಿಸಬೇಕು ಅಂತಾ ಹೇಳಿದ್ದಾರೆ.
ಇದನ್ನೂ ಓದಿ: Sakshi Murder Case: ಸಾಕ್ಷಿಯನ್ನು ಬರ್ಬರವಾಗಿ ಹತ್ಯೆಗೈದ ಸಾಹಿಲ್ ತನ್ನ ತಪ್ಪೊಪ್ಪಿಗೆಯಲ್ಲಿ ಹೇಳಿದ್ದೇನು?
VIDEO | “Immersing your (wrestlers) medals in Ganga won’t make the government hang me. Present your proof to the court, and if they choose to hang me, I will accept,” says WFI chief Brij Bhushan Singh on wrestlers' charges against him. pic.twitter.com/VxzverByEa
— Press Trust of India (@PTI_News) May 31, 2023
ನನ್ನ ವಿರುದ್ಧದ ಆರೋಪ ಸಾಬೀತಾದರೆ ನಾನು ಯಾವುದೇ ರೀತಿಯ ಶಿಕ್ಷೆಯನ್ನು ಅನುಭವಿಸಲು ಸಿದ್ಧನಿದ್ದೇನೆ. ನ್ಯಾಯಾಲಯವು ನನಗೆ ಗಲ್ಲು ಶಿಕ್ಷೆ ವಿಧಿಸಿದರೂ ಅದಕ್ಕೆ ನಾನು ಸಿದ್ಧನಿದ್ದೇನೆ. ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ ಅಂತಾ ಹೇಳಿದ್ದಾರೆ.
ನನ್ನ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಸಾಕ್ಷಿ ಇದ್ದರೂ ನ್ಯಾಯಾಲಯಕ್ಕೆ ಸಲ್ಲಿಸಿರಿ. ನಾನು ಯಾವುದೇ ರೀತಿಯ ಶಿಕ್ಷೆಯನ್ನು ಅನುಭವಿಸಲು ಸಿದ್ಧನಿದ್ದೇನೆ ಅಂತಾ ಬ್ರಿಜ್ ಭೂಷನ್ ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಸವಾಲು ಹಾಕಿದ್ದಾರೆ.
ಇದನ್ನೂ ಓದಿ: Rajasthan: ಸಚಿನ್ ಪೈಲಟ್ ಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ? 4 ಗಂಟೆಗಳ ಕಾಲ ನಡೆದ ಮೀಟಿಂಗ್ ನಲ್ಲಿ ನಡೆದಿದ್ದೇನು?
ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ಭೂಷನ್ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೊಗಟ್ ಹರಿದ್ವಾರದ ಗಂಗಾ ನದಿಗೆ ಪದಕಗಳನ್ನು ಎಸೆಯಲು ಮುಂದಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.