ನವ ದೆಹಲಿ: ಗುಜರಾತ್ನಲ್ಲಿ ಆರನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯುವ ಮುನ್ಸೂಚನೆ ಕಾಣುತ್ತಿದೆ. ಗುಜರಾತ್ನ ಒಟ್ಟು 182 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 99 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಕಾಂಗ್ರೇಸ್ 80 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈತನ್ಮದ್ಯೇ ದಕ್ಷಿಣ ಮತ್ತು ಮಧ್ಯ ಗುಜರಾತ್ನಲ್ಲಿ ಬಿಜೆಪಿ ಕಾಂಗ್ರೇಸ್ ಅನ್ನು ದೊಡ್ಡ ಅಂತರದಲ್ಲಿ ಹಿಮ್ಮೆಟ್ಟಿಸಿ ಬಹುಮತ ಸಾಧಿಸುತ್ತಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜ್ಕೊಟ್ ವಿಧಾನ ಸಹಬಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.
ಸ್ವತಂತ್ರ ಅಭ್ಯರ್ಥಿ ದಲಿತ ನಾಯಕ ಜಿಗ್ನೇಶ್ ಮೆವಾನಿ ವಡ್ಗಾಂವ್ ಕ್ಷೇತ್ರದಿಂದ ಗೆದ್ದಿದ್ದಾರೆ. ರಾಮ್ನಾಪುರ ಕ್ಷೇತ್ರದ ಕಾಂಗ್ರೆಸ್ ನಾಯಕ ಅಮೀಶ್ ಠಾಕೂರ್ ವಿಜಯವನ್ನು ದಾಖಲಿಸಿದ್ದಾರೆ. ಮೆಹ್ಸಾನಾ ಅವರು ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಆಯ್ಕೆ ಆಗಿದ್ದಾರೆ. ಕಾಂಗ್ರೆಸ್ ನಾಯಕ ಶಕ್ತಿ ಸಿಂಗ್ ಗೋಹಿಲ್ ಮಾಂಡ್ವಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಹಾರ್ದಿಕ್ ಪಟೇಲ್ ಅವರ ಪ್ರತಿಷ್ಠೆಯ ಕ್ಷೇತ್ರವಾದ ವೀರಮ್ಗಾಂ ಕ್ಷೇತ್ರದಿಂದ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
BJP workers celebrate outside party Headquarter in #Delhi as trends indicate party's victory in both #Himachal and #Gujarat pic.twitter.com/oyZyVi3Riz
— ANI (@ANI) December 18, 2017