ನವದೆಹಲಿ: ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ ನಿಧಾನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಭಾರತ ಓರ್ವ ಶ್ರೇಷ್ಠ ಮಗನನ್ನು ಕಳೆದುಕೊಂಡಿದೆ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ವಾಜಪೇಯಿ ಅವರು ಲಕ್ಷಾಂತರ ಜನರಿಂದ ಪ್ರೀತಿ, ಗೌರವ ಗಳಿಸಿದ್ದರು ಎಂದು ಹೇಳಿದ್ದಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ತಡೆಯುವ ಶಕ್ತಿ ನೀಡಲಿ. ನಾವು ಅವರನ್ನು ಖಂಡಿತಾ ಮಿಸ್ ಮಾಡಿಕೊಳ್ಳುತ್ತೇವೆ" ಎಂದಿದ್ದಾರೆ.
Today India lost a great son. Former PM, Atal Bihari Vajpayee ji, was loved and respected by millions. My condolences to his family & all his admirers. We will miss him. #AtalBihariVajpayee
— Rahul Gandhi (@RahulGandhi) August 16, 2018
ದೇಶಕಂಡ ಅತ್ಯುತ್ತಮ ನಾಯಕ, ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಗುರುವಾರ ಸಂಜೆ 5.05ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯ, ಕಿಡ್ನಿ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ವಾಜಪೇಯಿ ಅವರನ್ನು ಕ ಜೂ.11ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ 36 ಗಂಟೆಗಳಿಂದ ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ವಾಜಪೇಯಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾರೆ.