Six people of a family dead in house: ರಾಜಧಾನಿ ದೆಹಲಿಯ ಶಾಸ್ತ್ರಿ ಪಾರ್ಕ್ ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಸಿರುಗಟ್ಟಿರುವ ಕಾರಣದಿಂದಲೇ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ಗುರುವಾರ ರಾತ್ರಿ, ಸೊಳ್ಳೆ ಓಡಿಸಲು ಬಳಸುವ ಕಾಯಿಲ್ ಹಚ್ಚಿ ಒಂದೇ ಕೋಣೆಯಲ್ಲಿ ಮಲಗಿದ್ದರು. ಕೋಣೆಯ ಬಾಗಿಲು ಮುಚ್ಚಿತ್ತು. ಕಾಯಿಲ್ ಹಾಸಿಗೆಗೆ ತಾಗಿ ಬೆಂಕಿ ಹತ್ತಿಕೊಂಡಿದೆ. ಕೋಣೆಯ ಬಾಗಿಲು ಮುಚ್ಚಿದ್ದ ಕಾರಣ ಕಾರ್ಬನ್ ಮಾನಾಕ್ಸೈಡ್ ಕೋಣೆಯೊಳಗೆ ಹರಡಿಕೊಂಡಿದೆ. ಇದರಿಂದಾಗಿ ಕುಟುಂಬದ 6 ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ದೆಹಲಿಯ ಈಶಾನ್ಯ ಜಿಲ್ಲೆಯ ಡಿಸಿಪಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
Delhi | Six people of a family were found dead in their house in the Shastri Park area after they inhaled carbon monoxide produced as a result of the overnight burning of mosquito repellant while they were sleeping: DCP North East district
— ANI (@ANI) March 31, 2023
ಇದನ್ನೂ ಓದಿ : Reels Queen Suicide: ಬುದ್ದಿ ಹೇಳಿದ್ದಕ್ಕೆ ನೇಣು ಬಿಗಿದುಕೊಂಡು ‘ರೀಲ್ಸ್ ಕ್ವೀನ್ʼ ಆತ್ಮಹತ್ಯೆ!
ಪೊಲೀಸರ ಪ್ರಕಾರ, ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಸ್ತ್ರಿ ಪಾರ್ಕ್ ಬಳಿಯ ಮೀನು ಮಾರುಕಟ್ಟೆ ಬಳಿ ನಿರ್ಮಿಸಲಾಗಿದ್ದ ಮನೆಗೆ ಬೆಂಕಿ ಬಿದ್ದಿರುವ ಬಗ್ಗೆ ದೂರವಾಣಿಯಲ್ಲಿ ಮಾಹಿತಿ ಬಂದಿತ್ತು. ಇದಾದ ನಂತರ ಪೊಲೀಸರು ಸ್ಥಳಕ್ಕಾಗಮಿಸಿ ನೋಡಿದಾಗ ಮನೆಯ ಕೊಠಡಿಯಲ್ಲಿದ್ದ 9 ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ತಿಳಿದು ಬಂದಿದೆ.
ತಕ್ಷಣ ಪೊಲೀಸರು ಅವರನ್ನು ಸಮೀಪದ ಚಂದ್ರಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪೈಕಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ಗಾಯಗೊಂಡ 3 ಮಂದಿಗೆ ಚಿಕಿತ್ಸೆ ಮುಂದುವರಿದಿದೆ. ಮೃತರಲ್ಲಿ 4 ಪುರುಷರು, ಮಹಿಳೆ ಮತ್ತು ಒಂದೂವರೆ ವರ್ಷದ ಮಗು ಸೇರಿದೆ.
ಇದನ್ನೂ ಓದಿ : ಇಂದೋರ್‌ನಲ್ಲಿ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 11 ಜನರು ಸಾವು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.