Wayanad landslide updates : ಭಾರೀ ಮಳೆಯಿಂದಾಗಿ ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ್ದು, 100ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಸಂತ್ರಸ್ತರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಅವಘಡದಲ್ಲಿ ಇಲ್ಲಿಯವರೆಗೆ ಒಟ್ಟು 19 ಜನರು ಸಾವನ್ನಪ್ಪಿದ್ದಾರೆ ಎಂದು ಮೊದಲು ಹೇಳಲಾಗುತ್ತಿತ್ತು, ಇದರಲ್ಲಿ ಮೂವರು ಮಕ್ಕಳು ಸೇರಿದ್ದಾರೆ.
ಇದೀಗ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಆರು ಮೃತದೇಹಗಳನ್ನು ಮೆಪ್ಪಾಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಾಗೂ 5 ಮೃತದೇಹಗಳನ್ನು ಖಾಸಗಿ ವೈದ್ಯಕೀಯ ಕಾಲೇಜಿಗೆ ತರಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.. ರಕ್ಷಣಾ ಕಾರ್ಯ ಮುಂದುವರೆದಿದೆ.
ಪೀಡಿತ ಪ್ರದೇಶದಲ್ಲಿ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳನ್ನು ನಿಯೋಜಿಸಲಾಗಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ತಿಳಿಸಿದೆ. ಎನ್ಡಿಆರ್ಎಫ್ನ ಹೆಚ್ಚುವರಿ ತಂಡ ವಯನಾಡಿಗೆ ತೆರಳುತ್ತಿದೆ. ಸಿಎಂಒ ಪ್ರಕಾರ, ಆರೋಗ್ಯ ಇಲಾಖೆ - ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಸ್ಥಳದಲ್ಲಿ ತುರ್ತು ಆರೋಗ್ಯ ಕೇಂದ್ರಗಳನ್ನು ತೆರೆದಿದ್ದು, ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ಅನ್ನು ನೀಡಿದೆ.
ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸುವ ನಿಟ್ಟಿನಲ್ಲಿ ಸಧ್ಯ ವಾಯುಪಡೆಯ MI-17 ನ ಎರಡು ಹೆಲಿಕಾಪ್ಟರ್ಗಳು ಮತ್ತು ಒಂದು ALH ಸೂಲೂರಿನಿಂದ ಬೆಳಿಗ್ಗೆ 7.30 ಕ್ಕೆ ಘಟನಾ ಸ್ಥಳಕ್ಕೆ ಹೊರಟಿವೆ. ಕೇರಳದ ವೈತಿರಿ, ಕಾಲಾಪಟ್ಟಾ, ಮೆಪ್ಪಾಡಿ ಮತ್ತು ಮನಂತವಾಡಿ ಸೇರಿದಂತೆ ಎಲ್ಲಾ ಆಸ್ಪತ್ರೆಗಳು ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧವಾಗಿವೆ. ವಯನಾಡಿನಲ್ಲಿ ಹೆಚ್ಚಿನ ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲಾಗುವುದು ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.