ಭಾರತ-ಪಾಕ್ ನಡುವಿನ ಉದ್ವಿಗ್ನತೆ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ -ಚುನಾವಣಾ ಆಯೋಗ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹಠಾತ್ ಉದ್ವಿಗ್ನತೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಶುಕ್ರವಾರ ದೃಢಪಡಿಸಿದರು.

Last Updated : Mar 1, 2019, 05:03 PM IST
ಭಾರತ-ಪಾಕ್ ನಡುವಿನ ಉದ್ವಿಗ್ನತೆ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ -ಚುನಾವಣಾ ಆಯೋಗ  title=

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹಠಾತ್ ಉದ್ವಿಗ್ನತೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಶುಕ್ರವಾರ ದೃಢಪಡಿಸಿದರು.

ದೇಶದಲ್ಲೆಡೆ ಲೋಕಸಭಾ ಚುನಾವಣೆಯೂ ನಿಗದಿತ ಸಮಯದಲ್ಲಿ ನಡೆಯಲಿದೆ ಎಂದು ಹೇಳಿದರು. ಕಳೆದ ಎರಡು ದಿನಗಳಿಂದ ಮತದಾನದ ಸಿದ್ಧತೆಗಳನ್ನು ಪರಿಶೀಲಿಸಲು ಲಕ್ನೋಗೆ ಆಗಮಿಸಿದ್ದಾರೆ.ಚುನಾವಣಾ ಆಯೋಗದ ಹೊಸ ಅಧಿಸೂಚನೆಯ ಪ್ರಕಾರ, ಈ ಭಾರಿ ಅಭ್ಯರ್ಥಿಗಳು ವಿದೇಶದಲ್ಲಿ ತಮ್ಮ ಆಸ್ತಿಗಳ ವಿವರಗಳನ್ನು ನೀಡಬೇಕು. ಐ-ಟಿ ಇಲಾಖೆ ಇದನ್ನು ಪರಿಶೀಲಿಸುತ್ತದೆ.ಇದರಲ್ಲಿ ಯಾವುದಾದರೂ ವ್ಯತ್ಯಾಸಗಳು ಕಂಡುಬಂದರೆ ನಂತರ ಅದನ್ನು ಚುನಾವಣಾ ಆಯೋಗ (ಇಸಿ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ ಅಲ್ಲದೆ ಕಠಿಣ ಕ್ರಮವನ್ನು ಸಹ ತೆಗೆದುಕೊಳ್ಳಲಿದೆ ಎಂದು ಇಸಿ ಹೇಳಿದೆ.

ಈಗಾಗಲೇ ಸೂಕ್ಷ್ಮಪ್ರದೇಶಗಳನ್ನು ಗುರುತಿಸಲು ಮೊದಲೇ ಕ್ರಮ ತೆಗೆದುಕೊಳ್ಳಲಾಗುವುದು ಹಾಗೂ ಕೋಮುವಾರು ಸೂಕ್ಷತೆಯನ್ನು ಹೊಂದಿರುವ ಸ್ಥಳಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.ಇಂತಹ ಸ್ಥಳಗಳಲ್ಲಿ ಸಿಸಿಟಿವಿ ಗಳನ್ನು ಅಳವಡಿಸುವುದಾಗಿ ಚುನಾವಣಾ ಆಯೋಗ ಹೇಳಿದೆ.

 

Trending News