ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ತಿಳಿಸಿದ್ದು, ಫೋಟೋಗಳನ್ನು ಹಂಚಿಕೊಂಡಿದೆ.
ಮಮತಾ ಬ್ಯಾನರ್ಜಿಯವರು ಗುರುವಾರ ಬಿದ್ದು ತಮ್ಮ ಹಣೆಗೆ ಗಾಯ ಮಾಡಿಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮಮತಾ ಬ್ಯಾನರ್ಜಿಯವರ ಹಣೆಯಿಂದ ರಕ್ತ ಸೋರುತ್ತಿರುವ ಫೋಟೋಗಳನ್ನು TMC ಹಂಚಿಕೊಂಡಿದೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ ಹೊತ್ತಲ್ಲಿಯೇ ಅಭಿವೃದ್ಧಿ ಜಟಾಪಟಿ!
Our chairperson @MamataOfficial sustained a major injury.
Please keep her in your prayers 🙏🏻 pic.twitter.com/gqLqWm1HwE— All India Trinamool Congress (@AITCofficial) March 14, 2024
ʼಮಮತಾ ಬ್ಯಾನರ್ಜಿಯವರು ಬಿದ್ದು ಹಣೆಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಅವರ ಹಣೆಯ ಮಧ್ಯೆದಲ್ಲಿ ಗಾಯವಾಗಿದ್ದು, ಮುಖದ ಮೇಲೆ ರಕ್ತ ಸೋರುತ್ತಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಲ್ಕತ್ತಾದ SSKM ಆಸ್ಪತ್ರೆಯಲ್ಲಿ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಶೀಘ್ರವೇ ಗುಣಮುಖರಾಗಲಿ ಎಂದು ಪಾರ್ಥಿಸಿʼ ಅಂತಾ TMC ಟ್ವೀಟ್ ಮಾಡಿದೆ.
ಮಮತಾ ಬ್ಯಾನರ್ಜಿಯವರು ಎಲ್ಲಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ ಅನ್ನೋ ಮಾಹಿತಿ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ಕೆ.ಎಸ್.ಈಶ್ವರಪ್ಪ ಆರೋಪ ವಿಚಾರವಾಗಿ ಪ್ರಹ್ಲಾದ್ ಜೋಶಿ ಹೇಳಿದ್ದೇನು?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.