ಉತ್ತರ ಪ್ರದೇಶದ ಘಜಿಯಾಬಾದ್'ನಲ್ಲಿ 100 ಕೆ.ಜಿ.ಗೂ ಹೆಚ್ಚು ಚಿನ್ನ ವಶ

ಈ ವಿಷಯಕ್ಕೆ ಸಂಬಂಧಿಸಿದಂತೆ ಕನಿಷ್ಠ ನಾಲ್ಕು ಜನರನ್ನು ಬಂಧಿಸಲಾಗಿದೆ.

Last Updated : Mar 22, 2019, 01:03 PM IST
ಉತ್ತರ ಪ್ರದೇಶದ ಘಜಿಯಾಬಾದ್'ನಲ್ಲಿ 100 ಕೆ.ಜಿ.ಗೂ ಹೆಚ್ಚು ಚಿನ್ನ ವಶ title=

ಉತ್ತರಪ್ರದೇಶದ ಘಜಿಯಾಬಾದ್ ಜಿಲ್ಲೆಯಲ್ಲಿ ವಾಹನದಲ್ಲಿ ಸಾಗಿಸುತ್ತಿದ್ದ 100 ಕೆಜಿಗೂ ಹೆಚ್ಚು ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಮೋದಿನಗರದಲ್ಲಿ ವಾಹನಗಳ ಪರಿಶೀಲನೆ ನಡೆಸುತ್ತಿದ್ದ ರಾಜ್ಯ ಪೊಲೀಸರು 38 ಕೋಟಿ ರೂ. ಅಂದಾಜು ವೆಚ್ಚದ 120 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಚಿನ್ನವನ್ನು ದೆಹಲಿಯಿಂದ ಉತ್ತರ ಪ್ರದೇಶದ ಹರಿದ್ವಾರದ ಕಾರ್ಖಾನೆಗೆ ಸಾಗಿಸಲಾಗುತ್ತಿತ್ತು, ಅಲ್ಲಿ ಈ ಚಿನ್ನವನ್ನು ಬಿಸ್ಕಟ್ನ ಆಕಾರದಲ್ಲಿ ತಯಾರಿಸಲಾಗುತ್ತದೆ ಮತ್ತು ಇತರ ಸ್ಥಳಗಳಿಗೆ ಕಳುಹಿಸಲಾಗುತ್ತದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಕನಿಷ್ಠ ನಾಲ್ಕು ಜನರನ್ನು ಬಂಧಿಸಲಾಗಿದೆ. ಬಂಧಿಸತರಲ್ಲಿ ಓರ್ವ ಕ್ಯಾಷಿಯರ್, ಒಬ್ಬ ಚಾಲಕ ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಸೇರಿದ್ದಾರೆ.
 

Trending News