ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ಸುವರ್ಣಾವಕಾಶ. ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ರಿಸ್ಕ್ ಆಫೀಸರ್, ಡೆಪ್ಯುಟಿ ಚೀಫ್ ಫೈನಾನ್ಶಿಯಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಯ ಮಾಹಿತಿ: ರಿಸ್ಕ್ ಆಫೀಸರ್ -1 ಮತ್ತು ಡೆಪ್ಯುಟಿ ಚೀಫ್ ಫೈನಾನ್ಶಿಯಲ್ ಆಫೀಸರ್ -1 ಹುದ್ದೆಗಳಿಗೆ ಖಾಲಿ ಇವೆ.
ಇದನ್ನೂ ಓದಿ: Daily GK Quiz: ಅಮೆರಿಕ ದೇಶದ ಮೊದಲ ಅಧ್ಯಕ್ಷರು ಯಾರು..?
ವಿದ್ಯಾರ್ಹತೆ: ರಿಸ್ಕ್ ಆಫೀಸರ್ಗೆ ಪದವಿ, ಸಿಎ, ಸಿಎಂಎ, ಸಿಎಫ್ಎ ಮಾಡಿರಬೇಕು ಮತ್ತು ಡೆಪ್ಯುಟಿ ಚೀಫ್ ಫೈನಾನ್ಶಿಯಲ್ ಆಫೀಸರ್ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ: ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಉದ್ಯೋಗದ ಸ್ಥಳ: ಬೆಂಗಳೂರು
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: Online Shopping: ಆನ್ಲೈನ್ ಶಾಪಿಂಗ್ ಕ್ರೇಜ್ ಮಹಿಳೆಯರಿಗಿಂತ ಪುರುಷರಿಗೇ ಹೆಚ್ಚು! ಇಲ್ಲಿದೆ ವರದಿ
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಈ ಲಿಂಕ್ https://nabfins.org/Careers/form.php?id=565 ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.