ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿದೆ. ಇಡಿ ಇಬ್ಬರೂ ನಾಯಕರನ್ನು ವಿಚಾರಣೆಗೆ ಕರೆದಿದ್ದು, ಜೂನ್ 8ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಲಾಗುತ್ತಿದೆ. ನೋಟಿಸ್‌ಗೆ ಸಂಬಂಧಿಸಿದಂತೆ, ಪಕ್ಷ ಮತ್ತು ಅದರ ನಾಯಕತ್ವವು ಹೆದರುವುದಿಲ್ಲ ಮತ್ತು ತಲೆಬಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
ಇದನ್ನು ಓದಿ: ಕಾಂಗ್ರೆಸ್‌ನಲ್ಲಿ ಮುಂದುವರೆದ ಗುಡ್ ಬೈ ಪರ್ವ: ಬ್ರಿಜೇಶ್ ಕಾಳಪ್ಪ ರಾಜೀನಾಮೆ ನೀಡಲು ಇದುವೇ ಕಾರಣ!
ಇಡಿ ಕ್ರಮದ ಕುರಿತು, ಕಾಂಗ್ರೆಸ್ ನಾಯಕ ಮತ್ತು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, "ಸೋನಿಯಾ ಗಾಂಧಿ ಅವರೇ ಇಡಿ ಕಚೇರಿಗೆ ಹೋಗಿ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ" ಎಂದು ಹೇಳಿದರು. ‘ಇದೊಂದು ದೊಡ್ಡ ಕಾಯಿಲೆ. ಈ ರೋಗವು ಎದುರಾಳಿ ಪಕ್ಷಗಳನ್ನು ಗುರಿಯಾಗಿಸುವುದು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪ್ರತಿಪಕ್ಷ ನಾಯಕರ ವಿರುದ್ಧ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ.
ನಾವು ಹೆದರುವುದಿಲ್ಲ, ತಲೆಬಾಗುವುದಿಲ್ಲ: ರಣದೀಪ್ ಸುರ್ಜೇವಾಲಾ
ಕಾಂಗ್ರೆಸ್ ನಾಯಕತ್ವದ ವಿರುದ್ಧ ದೇಶವನ್ನು ದಾರಿ ತಪ್ಪಿಸುವ ಹೇಡಿತನದ ಸಂಚು ರೂಪಿಸಲಾಗುತ್ತಿದೆ ಎಂದು ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ, ''ಮೋದಿ ಸರಕಾರ ಸೇಡಿನ ಮನೋಭಾವದಲ್ಲಿ ಕುರುಡಾಗಿದೆ. ಈ ಬಾರಿ ಅವರು ಹೊಸ ಹೇಡಿತನದ ಸಂಚು ರೂಪಿಸಿದ್ದಾರೆ. ಇದೀಗ ಪ್ರಧಾನಿ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಇಡಿಯಿಂದ ನೋಟಿಸ್ ಜಾರಿ ಮಾಡಿದ್ದಾರೆ. ಸರ್ವಾಧಿಕಾರಿ ಭಯಗೊಂಡಿರುವುದು ಸ್ಪಷ್ಟವಾಗಿದೆ. ನಾವು ಹೆದರುವುದಿಲ್ಲ, ತಲೆಬಾಗುವುದಿಲ್ಲ" ಎಂದು ಹೇಳಿದ್ದಾರೆ.
2014-15 ರಿಂದ ಕ್ರಮ ನಡೆಯುತ್ತಿದೆ: ಅಭಿಷೇಕ್ ಮನು ಸಿಂಘ್ವಿ
ಅಭಿಷೇಕ್ ಮನು ಸಿಂಘ್ವಿ ಮಾತನಾಡಿ, 'ಈ ವಿಷಯಗಳ ಬಗ್ಗೆ 2014-15 ರಿಂದ ಕ್ರಮ ನಡೆಯುತ್ತಿದೆ. ಇಂದು ಈ ವಿಷಯಗಳ ಬಗ್ಗೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಇಂತಹ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಗಳು ಕೇಳಿ ಬರುತ್ತಿದ್ದು, ಇದರಲ್ಲಿ ಹಣದ ವ್ಯವಹಾರದ ಮಾತೇ ಇಲ್ಲ. ಸೇಡಿನ ಮನೋಭಾವದಿಂದ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಹುರುಳಿಲ್ಲ ಎಂದು ಕಿಡಿಕಾರಿದರು.
ಇದನ್ನು ಓದಿ: World Milk Day: ಈ 5 ಆಹಾರಗಳ ಸೇವನೆ ಬಳಿಕ ಎಂದಿಗೂ ಹಾಲು ಕುಡಿಯಬೇಡಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಬನ್ಸಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಪ್ರಶ್ನಿಸಿದೆ. ಈ ವೇಳೆ ಪವನ್ ಬನ್ಸಾಲ್ ಅವರ ಬಳಿ ಹಣಕಾಸಿನ ವಹಿವಾಟು ಸೇರಿದಂತೆ ಹಲವು ಅಂಶಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ