'ನವಜೋತ್ ಸಿಂಗ್ ಸಿಧು 'ಪಂಜಾಬ್ ರಾಜಕೀಯದ ರಾಖಿ ಸಾವಂತ್'

ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಮತ್ತು ರಾಷ್ಟ್ರೀಯ ವಕ್ತಾರ ರಾಘವ್ ಚಡ್ಡಾ ಅವರು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು 'ಪಂಜಾಬ್ ರಾಜಕೀಯದ ರಾಖಿ ಸಾವಂತ್' ಎಂದು ವ್ಯಂಗ್ಯವಾಡಿದ್ದಾರೆ.

Written by - Zee Kannada News Desk | Last Updated : Sep 17, 2021, 05:07 PM IST
  • ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಮತ್ತು ರಾಷ್ಟ್ರೀಯ ವಕ್ತಾರ ರಾಘವ್ ಚಡ್ಡಾ ಅವರು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು 'ಪಂಜಾಬ್ ರಾಜಕೀಯದ ರಾಖಿ ಸಾವಂತ್' ಎಂದು ವ್ಯಂಗ್ಯವಾಡಿದ್ದಾರೆ.
  • ಅರವಿಂದ ಕೇಜ್ರಿವಾಲ್ ಮತ್ತು ಎಎಪಿಯನ್ನು ಕೃಷಿ ಸುಧಾರಣೆಗಳ ಕುರಿತು ಟೀಕಿಸಿದ ಸಿದ್ದು ಅವರ ವೀಡಿಯೋಗೆ ಪ್ರತಿಕ್ರಿಯೆಯಾಗಿ ಅವರ ಟೀಕೆ ಬಂದಿದೆ.
 'ನವಜೋತ್ ಸಿಂಗ್ ಸಿಧು 'ಪಂಜಾಬ್ ರಾಜಕೀಯದ ರಾಖಿ ಸಾವಂತ್' title=

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಮತ್ತು ರಾಷ್ಟ್ರೀಯ ವಕ್ತಾರ ರಾಘವ್ ಚಡ್ಡಾ ಅವರು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು 'ಪಂಜಾಬ್ ರಾಜಕೀಯದ ರಾಖಿ ಸಾವಂತ್' ಎಂದು ವ್ಯಂಗ್ಯವಾಡಿದ್ದಾರೆ.

ಅರವಿಂದ ಕೇಜ್ರಿವಾಲ್ ಮತ್ತು ಎಎಪಿಯನ್ನು ಕೃಷಿ ಸುಧಾರಣೆಗಳ ಕುರಿತು ಟೀಕಿಸಿದ ಸಿದ್ದು ಅವರ ವೀಡಿಯೋಗೆ ಪ್ರತಿಕ್ರಿಯೆಯಾಗಿ ಅವರ ಟೀಕೆ ಬಂದಿದೆ.

ಇದನ್ನೂ ಓದಿ: Punjab Congress Crisis: ರಾಹುಲ್ ಗಾಂಧಿ ಭೇಟಿಯಾದ ನವಜೋತ್ ಸಿಂಗ್ ಸಿಧು

'ಪಂಜಾಬ್ ರಾಜಕೀಯದ ರಾಖಿ ಸಾವಂತ್-ನವಜೋತ್ ಸಿಂಗ್ ಸಿಧು (Navjot Singh Sidhu)- ಕ್ಯಾಪ್ಟನ್ ವಿರುದ್ಧ ತಡೆರಹಿತ ವಾಗ್ದಾಳಿಗಾಗಿ ಕಾಂಗ್ರೆಸ್ ಹೈಕಮಾಂಡ್ ನಿಂದ ಬೈಸಿಕೊಂಡಿದ್ದಾರೆ.ಆದ್ದರಿಂದ ಇಂದು ಸ್ವಲ್ಪ ಬದಲಾವಣೆ ಇರಲಿ ಎಂದು ಅವರು ಕೇಜ್ರಿವಾಲ್ ಹಿಂದೆ ಬಿದ್ದಿದ್ದಾರೆ.ನಾಳೆ ತನಕ ಕಾಯಿರಿ ಅವರು ಕ್ಯಾಪ್ಟನ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಪುನರಾರಂಭಿಸುತ್ತಾರೆ ಎಂದು ಚಡ್ಡಾ ವ್ಯಂಗ್ಯವಾಡಿದ್ದಾರೆ.

'ಅರವಿಂದ ಕೇಜ್ರಿವಾಲ್ ಜೀ,ನೀವು ಖಾಸಗಿ ಮಂಡಿಯ ಕೇಂದ್ರೀಯ ಕಪ್ಪು ಕಾನೂನಿಗೆ ಸೂಚನೆ ನೀಡಿದ್ದೀರಿ! ಅದನ್ನು ಡಿ-ನೋಟಿಫೈ ಮಾಡಲಾಗಿದೆಯೇ ಅಥವಾ ಛದ್ಮವೇಷ ಇನ್ನೂ ಮುಂದುವರಿದಿದೆಯೇ?"ಎಂದು ಸಿಧು ವಿಡಿಯೋದಲ್ಲಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ಗೆ ಔತಣಕೂಟಕ್ಕೆ ಆಹ್ವಾನ ನೀಡಿ ಅಚ್ಚರಿ ಮೂಡಿಸಿದ ಸಿಎಂ ಅಮರಿಂದರ್ ಸಿಂಗ್ ...!

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ನಡುವೆ ನಡೆಯುತ್ತಿರುವ ಅಧಿಕಾರದ ಜಗಳವು ಪಕ್ಷದ ಕಾರ್ಯಕರ್ತರನ್ನು ವಿಭಜಿಸಿದೆ.ಸಿಧು ಅವರ ಸಲಹೆಗಾರರ ​​ಕೆಲವು ಟೀಕೆಗಳಿಗೆ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮುಂದುವರಿದಿದೆ. ಇತ್ತೀಚೆಗೆ, ಸಿದ್ದು ಮಾದಕ ವಸ್ತುಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಯನ್ನು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News