ನವದೆಹಲಿ: COVID-19 ವೈರಸ್ ಇರುವ ಕಾರಣ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಎನ್ ಇಇಟಿ (NEET) ಮತ್ತು ಜೆಇಇ (JEE)ಗಳನ್ನು ರದ್ದು ಪಡಿಸುವಂತೆ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.
ಆಗಸ್ಟ್ 26ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರ ನೇತೃತ್ವದಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೂರೇನ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಭೆ ನಡೆಸಿದರು. ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamatha Banargee) ಅವರು COVID-19 ವೈರಸ್ ಇರುವ ಕಾರಣ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಎನ್ ಇಇಟಿ (NEET) ಮತ್ತು ಜೆಇಇ (JEE)ಗಳನ್ನು ರದ್ದು ಪಡಿಸುವಂತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಪ್ರಸ್ತಾಪ ಮಾಡಿದರು. ಇದನ್ನು ಇತರರೂ ಒಪ್ಪಿದರು ಎನ್ನಲಾಗಿದೆ.
COVID-19 ವೈರಸ್ ಇರುವ ಕಾರಣಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಎನ್ ಇಇಟಿ (NEET) ಮತ್ತು ಜೆಇಇ (JEE)ಗಳನ್ನು ಮುಂದೂಡುವಂತೆ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ವಿವಿಧ ರಾಜ್ಯಗಳಿಂದ ಒಟ್ಟು 11 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಷ್ಟೂ ಅರ್ಜಿಗಳನ್ನು ಒಟ್ಟು ಮಾಡಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಆಗಸ್ಟ್ 17ರಂದು ಅರ್ಜಿಗಳ ಮನವಿಯನ್ನು ತಿರಸ್ಕರಿಸಿತ್ತು.
COVID-19 ಲಸಿಕೆ ಬಿಡುಗಡೆಯ ಹಾದಿಯಲ್ಲಿದೆ. ಲಸಿಕೆ ಬರುವವರೆಗೂ ಪರೀಕ್ಷೆ ಮುಂದೂಡಿ ಎಂದು ಅರ್ಜಿದಾರರ ಪರವಾಗಿ ವಕೀಲ ಅಲೋಕ್ ಶ್ರೀವಾಸ್ತವ ವಾದಿಸಿದರಾದರೂ ಸುಪ್ರೀಂ ಕೋರ್ಟ್ ಮಾನ್ಯ ಮಾಡಿರಲಿಲ್ಲ. COVID-19 ಜೊತೆಗೆ ಜೀವನ ಸಾಗಬೇಕಿದೆ. ಅದಕ್ಕಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಬಲಿಕೊಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ, ನ್ಯಾಯಮೂರ್ತಿ ಬಿಆರ್ ಗವಾಯ್ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಹೇಳಿತ್ತು.
ಸುಪ್ರೀಂ ಕೋರ್ಟ್ COVID-19 ವೈರಸ್ ಇರುವ ಕಾರಣ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಎನ್ ಇಇಟಿ (NEET) ಮತ್ತು ಜೆಇಇ (JEE)ಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಂತೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಪರೀಕ್ಷೆಗಳಿಗೆ ದಿನಾಂಕವನ್ನು ಪ್ರಕಟಿಸಿತ್ತು. ಸೆಪ್ಟೆಂಬರ್ 1ರಿಂದ 6ರವರೆಗೆ ಜೆಇಇ (JEE) ಮತ್ತು ಸೆಪ್ಟೆಂಬರ್ 13ರಂದು ಎನ್ ಇಇಟಿ (NEET) ಪರೀಕ್ಷೆಗಳಿಗೆ ದಿನಾಂಕ ಘೋಷಿಸಿತ್ತು.