ನವದೆಹಲಿ: COVID-19 ರ ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಸಾವುಗಳು ಸಂಭವಿಸಿಲ್ಲ ಎನ್ನುವ ಕೇಂದ್ರದ ಉತ್ತರದ ಬಗ್ಗೆ ಕಿಡಿ ಕಾರಿರುವ ರಾಹುಲ್ ಗಾಂಧಿ ‘ಸಬ್ ಯಾದ್ ರಖಾ ಜಯೇಗಾ’ (ಎಲ್ಲವನ್ನೂ ನೆನಪಿಸಿಕೊಳ್ಳಲಾಗುವುದು) ಎಂದು ಹೇಳಿದ್ದಾರೆ.
ಈ ಕುರಿತಾಗಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದ ನಂತರ ಪ್ರತಿಪಕ್ಷದಿಂದ ತೀವ್ರ ಟೀಕೆಗೆ ಗುರಿಯಾಗಿದೆ.
ಇದನ್ನೂ ಓದಿ : ಇನ್ನು ಈ ರೀತಿ ಡೇಟಾ ಬ್ಯಾಕ್ ಅಪ್ ಮಾಡಲಿದೆ WhatsApp, ಬಳಕೆದಾರರ ಮೇಲಾಗುವ ಪರಿಣಾಮ ಏನು?
ಕೇಂದ್ರ ಆರೋಗ್ಯ ರಾಜ್ಯ ಸಚಿವ ಭಾರತಿ ಪ್ರವೀಣ್ ಪವಾರ್ ವಿರುದ್ಧ ಎರಡು ದಿನಗಳ ಹಿಂದೆ ರಾಜ್ಯಸಭೆಯಲ್ಲಿ"ಸಾವುಗಳನ್ನು ವರದಿ ಮಾಡಲು ವಿವರವಾದ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿದೆ.ಅದರ ಪ್ರಕಾರ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿಯಮಿತವಾಗಿ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪ್ರಕರಣಗಳು ಮತ್ತು ಸಾವುಗಳನ್ನು ವರದಿ ಮಾಡುತ್ತವೆ. ಆದಾಗ್ಯೂ, ಆಮ್ಲಜನಕದ ಕೊರತೆಯಿಂದ ಯಾವುದೇ ಸಾವುಗಳು ನಿರ್ದಿಷ್ಟವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವರದಿಯಾಗಿಲ್ಲ "ಎಂದು ತಿಳಿಸಿದ್ದರು.
ಇದನ್ನೂ ಓದಿ : Aadhaar-SIM: ಒಂದು ಆಧಾರ್ ಕಾರ್ಡ್‌ನಿಂದ ಎಷ್ಟು ಸಿಮ್‌ಗಳನ್ನು ಖರೀದಿಸಬಹುದು?
सब याद रखा जाएगा।#OxygenShortage pic.twitter.com/I5ouDxz7IR
— Rahul Gandhi (@RahulGandhi) July 22, 2021
ಇದಕ್ಕೆ ಪ್ರತಿಕ್ರಿಯಿಸಿದ ಕೆ.ಸಿ ವೇಣುಗೋಪಾಲ್,ರಾಷ್ಟ್ರ ರಾಜಧಾನಿ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಆಮ್ಲಜನಕದ ಕೊರತೆಯಿಂದ ಜನರು ಹೇಗೆ ಸಾವನ್ನಪ್ಪಿದ್ದಾರೆಂದು ಎಲ್ಲರೂ ನೋಡಿದ್ದಾರೆ ಎಂದು ಹೇಳಿದರು."ವಾಸ್ತವವಾಗಿ, ಸಚಿವರು ಸದನವನ್ನು ದಾರಿತಪ್ಪಿಸಿದರು ಮತ್ತು ನಾನು ಖಂಡಿತವಾಗಿಯೂ ಆ ಸಚಿವರ ವಿರುದ್ಧ ಸವಲತ್ತು ನೋಟಿಸ್ ನೀಡುತ್ತೇನೆ. ಏಕೆಂದರೆ ಸಚಿವರು ತಪ್ಪು ಮಾಹಿತಿ ನೀಡುವ ಮೂಲಕ ಸದನವನ್ನು ದಾರಿ ತಪ್ಪಿಸಿದರು" ಎಂದು ಅವರು ಹೇಳಿದರು.
ಎರಡನೇ ಅಲೆ ವೇಳೆ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವುಗಳು ವರದಿಯಾಗಿಲ್ಲ ಎಂಬ ಹೇಳಿಕೆಯ ವಿಚಾರವಾಗ ಪ್ರತಿಪಕ್ಷಗಳು ಕೇಂದ್ರದ ಮೇಲೆ ದಾಳಿ ನಡೆಸಿವೆ, ಅದು ತನ್ನ ತಪ್ಪುಗಳನ್ನು "ಸುಳ್ಳುಗಳ" ಮೂಲಕ ಮರೆಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿವೆ.
ಇದೇ ವೇಳೆ ಕಾಂಗ್ರೆಸ್, ಶಿವಸೇನೆ ಮತ್ತು ಎನ್‌ಸಿಪಿ ಅಧಿಕಾರದಲ್ಲಿರುವ ಮಹಾರಾಷ್ಟ್ರ, ಮತ್ತು ಬಿಜೆಪಿ ಆಡಳಿತದ ಮಧ್ಯಪ್ರದೇಶ ಮತ್ತು ಗುಜರಾತ್ ಈ ರಾಜ್ಯಗಳಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಸಮರ್ಥಿಸಿಕೊಂಡರೆ, ದೆಹಲಿಯ ಆರೋಗ್ಯ ಸಚಿವ ಮತ್ತು ಎಎಪಿ ನಾಯಕ ಸತ್ಯೇಂದರ್ ಜೈನ್ ರಾಷ್ಟ್ರ ರಾಜಧಾನಿ ಮತ್ತು ದೇಶಾದ್ಯಂತ ಇಂತಹ ಅನೇಕ ಸಾವುನೋವುಗಳು ಸಂಭವಿಸಿವೆ ಎಂದು ಹೇಳಿದರು.
ಇದನ್ನೂ ಓದಿ : YouTube Super Thanks: YouTuberಗಳಿಗಾಗಿ ತೆರೆದುಕೊಂಡ ಆದಾಯದ ಹೊಸ ಮಾರ್ಗ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ