ಬಿಜೆಪಿ ನಾಯಕ ಪೇಮಾ ಖಂಡು ಅವರು ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಮರು ಆಯ್ಕೆಯಾಗಿದ್ದು, ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಭಾರತೀಯ ಜನತಾ ಪಕ್ಷದ ಕೇಂದ್ರ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ತರುಣ್ ಚುಗ್ ಅವರ ಸಮ್ಮುಖದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರ ಸಭೆ ನಡೆದಿದ್ದು, ಶಾಸಕಾಂಗ ಪಕ್ಷದ ನಾಯಕರಾಗಿ ಪೇಮಾ ಖಂಡು ಅವಿರೋಧವಾಗಿ ಆಯ್ಕೆಯಾದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸಭೆಯಲ್ಲಿ ರಾಜ್ಯದ ಸಂಸದರೂ ಉಪಸ್ಥಿತರಿದ್ದರು.
ಇದನ್ನು ಓದಿ : ಬುಮ್ರಾ ಸಂದರ್ಶನ ಮಾಡಿದ ಸಂಜನಾ, ಪತಿ ಪತ್ನಿಯ ಚಿಟ್ ಚ್ಯಾಟ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್....!
2016ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದರು. ಇದಾದ ಬಳಿಕ ಪೆಮಾ ಖಂಡು ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದು, ಗುರುವಾರ ತಮ್ಮ ಸಂಪುಟದ ಜೊತೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಲೋಕಸಭೆ ಚುನಾವಣೆಯೊಂದಿಗೆ ಏಕಕಾಲದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದುಕೊಂಡಿದೆ.
“ರಾಜ್ಯದ ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಇಟಾನಗರದಲ್ಲಿ ನಡೆದ ಸಭೆಯಲ್ಲಿ ಪೆಮಾ ಖಂಡು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ನೆಚಾ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ