ತ್ರಿಶೂರ್: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇತಿಹಾಸ ಪ್ರಸಿದ್ದ ಗುರುವಾಯೂರು ಶ್ರೀಕೃಷ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ , ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದರು.
ಕೇರಳದ ತಿಶ್ರೂರ್ಗೆ ಶನಿವಾರ ಬೆಳಿಗ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲದ ಹೂವುಗಳಿಂದ ತುಲಾಭಾರ ಸೇವೆ ನೆರವೇರಿಸಿದರು. ಇದಕ್ಕಾಗಿ 112 ಕೆ.ಜಿ.ಯಷ್ಟು ಕಮಲದ ಹೂಗಳನ್ನು ತರಿಸಲಾಗಿತ್ತು. ಬಳಿಕ ದೇವರಿಗೆ ಕದಳಿ ಬಾಳೆ, ಹಾಲು ಪರಮಾನ್ನ , ತುಪ್ಪ ಮತ್ತು ಶೇಷ ವಸ್ತ್ರ ಸಮರ್ಪಿಸಿದರು.
Kerala: Prime Minister Narendra Modi at Sri Krishna Temple in Guruvayur of Thrissur. pic.twitter.com/hSH2UbMGIy
— ANI (@ANI) June 8, 2019
ಬಿಳಿ ಬಣ್ಣದ ಧೋತಿ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಸಾಥ್ ನೀಡಿದರು. ಮೋದಿ ಆಗಮನದ ಹಿನ್ನೆಲೆಯಲ್ಲಿ ಕೇರಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
#WATCH Kerala: Prime Minister Narendra Modi offers prayers at Sri Krishna Temple in Guruvayur of Thrissur. pic.twitter.com/HB98hDQAFk
— ANI (@ANI) June 8, 2019
ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಶ್ರೀಕೃಷ್ಣನ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. ಸುಮಾರು 5000 ವರ್ಷಗಳ ಇತಿಹಾಸವಿರುವ ಗುರುವಾಯೂರ್ ದೇವಾಲಯದ ಕೇರಳದ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ.