ನವದೆಹಲಿ: ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 78ನೇ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿರುವ ಅವರ ಸ್ಮಾರಕ ಸ್ಥಳ ವೀರಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ವೇಳೆ ರಾಬರ್ಟ್ ವಾದ್ರಾ, ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ.ವೇಣುಗೋಪಾಲ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಭಾವನಾತ್ಮಕ ವಿಡಿಯೋ ಹಂಚಿಕೊಂಡ ರಾಹುಲ್
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ತಂದೆಯ ಜನ್ಮದಿನದಂದು ಅವರನ್ನು ನೆನೆದು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ರಾಜೀವ್ ಗಾಂಧಿ ಅವರ ಜನ್ಮದಿನದಂದು ರಾಹುಲ್ ತಮ್ಮ ತಂದೆಯನ್ನು ವಿಶೇಷ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದಾರೆ.
पापा, आप हर पल मेरे साथ, मेरे दिल में हैं। मैं हमेशा प्रयास करूंगा कि देश के लिए जो सपना आपने देखा, उसे पूरा कर सकूं। pic.twitter.com/578m1vY2tT
— Rahul Gandhi (@RahulGandhi) August 20, 2022
ಇದನ್ನೂ ಓದಿ: ಪುರುಷರು-ಮಹಿಳೆಯರಲ್ಲಿ ಯಾರಿಗೆ ಹೆಚ್ಚಿನ ಲೈಂಗಿಕ ಸಂಗಾತಿಗಳು? ಸಮೀಕ್ಷೆ ಹೇಳಿದ್ದೇನು!!
‘ಅಪ್ಪಾ, ನೀವು ಪ್ರತಿಕ್ಷಣವೂ ನನ್ನೊಂದಿಗಿದ್ದೀರಿ, ನನ್ನ ಹೃದಯದಲ್ಲಿ ನೆಲೆಸಿದ್ದೀರಿ. ಈ ದೇಶಕ್ಕಾಗಿ ನೀವು ಕಂಡ ಕನಸನ್ನು ಸಾಕಾರಗೊಳಿಸಲು ನಾನು ನಿರಂತರವಾಗಿ ಪ್ರಯತ್ನಿಸುತ್ತೇನೆ’ ಎಂದು ರಾಹುಲ್ ಬರೆದುಕೊಂಡಿದ್ದಾರೆ. ಈ ಪೋಸ್ಟ್ನಲ್ಲಿ ರಾಹುಲ್ ತಮ್ಮ ಬಾಲ್ಯದ ನೆನಪುಗಳನ್ನು ಮೆಲಕು ಹಾಕಲು ಪ್ರಯತ್ನಿಸಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷದ ನಾಯಕರು ದೇಶದಾದ್ಯಂತ ಶನಿವಾರ ತಮ್ಮ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಐಟಿ ಮತ್ತು ಟೆಲಿಕಾಂ ಕ್ರಾಂತಿಗೆ ನಾಂದಿ
श्री @RahulGandhi की नजरों से #BharatKeRajiv pic.twitter.com/DJsEJJU7l8
— Congress (@INCIndia) August 20, 2022
‘ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನದಂದು ನಾವು ಅವರಿಗೆ ನಮಸ್ಕರಿಸುತ್ತೇವೆ’ ಎಂದು ಕಾಂಗ್ರೆಸ್ ತನ್ನ ಟ್ವಿಟರ್ ಹ್ಯಾಂಡಲ್ನಲ್ಲಿ ಬರೆದುಕೊಂಡಿದೆ. ‘21ನೇ ಶತಮಾನದ ಭಾರತದ ವಾಸ್ತುಶಿಲ್ಪಿಯಾಗಿದ್ದ ಅವರ ದೂರದೃಷ್ಟಿಯೇ ಭಾರತದಲ್ಲಿ ಐಟಿ ಮತ್ತು ಟೆಲಿಕಾಂ ಕ್ರಾಂತಿಗೆ ನಾಂದಿ ಹಾಡಿತು. ಇಂದು ನಾವು ಅವರ ಪರಂಪರೆಯನ್ನೇ ಅನುಕರಿಸುತ್ತಿದ್ದೇವೆ’ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.
ಇದನ್ನೂ ಓದಿ: Uttarakhand Cloudburst: ಡೆಹ್ರಾಡೂನ್ ನಲ್ಲಿ ಮೇಘಸ್ಪೋಟ-ವೈಷ್ಣೋದೇವಿಯಲ್ಲಿ ಪ್ರವಾಹ: ತತ್ತರಿಸಿದ ‘ಉತ್ತರಾಖಂಡ’
ಭಾರತದ ಅತಿ ಕಿರಿಯ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಡಿಜಿಟಲ್ ಇಂಡಿಯಾದ ನಿರ್ಮಾತೃ. ದೇಶಕ್ಕೆ ಕಂಪ್ಯೂಟರ್ ಪರಿಚಯಿಸಿದವರು, ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿ ತಂದು ಜನಸಾಮಾನ್ಯರಿಗೆ ಎಟುಕುವಂತೆ ಮಾಡಿದವರು.
ದೇಶಕ್ಕಾಗಿ ಪ್ರಾಣ ಸಮರ್ಪಿಸಿದ ರಾಜೀವ್ ಗಾಂಧಿಯವರ ಜನದಿನದಂದು ಅವರಿಗೆ ನಮ್ಮ ಗೌರವಪೂರ್ವಕ ನಮನಗಳು.#RajivGandhi pic.twitter.com/zE9jiqsP7y
— Karnataka Congress (@INCKarnataka) August 20, 2022
ಕರ್ನಾಟಕ ಕಾಂಗ್ರೆಸ್ ಹ ಟ್ವೀಟ್ ಮಾಡಿದ್ದು, ‘ಭಾರತದ ಅತಿ ಕಿರಿಯ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಡಿಜಿಟಲ್ ಇಂಡಿಯಾದ ನಿರ್ಮಾತೃ. ದೇಶಕ್ಕೆ ಕಂಪ್ಯೂಟರ್ ಪರಿಚಯಿಸಿದವರು, ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿ ತಂದು ಜನಸಾಮಾನ್ಯರಿಗೆ ಎಟುಕುವಂತೆ ಮಾಡಿದವರು. ದೇಶಕ್ಕಾಗಿ ಪ್ರಾಣ ಸಮರ್ಪಿಸಿದ ರಾಜೀವ್ ಗಾಂಧಿಯವರ ಜನದಿನದಂದು ಅವರಿಗೆ ನಮ್ಮ ಗೌರವಪೂರ್ವಕ ನಮನಗಳು’ ಎಂದು ನೆನಪಿಸಿಕೊಂಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.