ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಣಿಪುರ ಸಂಘರ್ಷವನ್ನು ಆದ್ಯತೆಯ ಮೇಲೆ ಪರಿಹರಿಸಬೇಕು ಎಂದು ಸೋಮವಾರ ಹೇಳಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಣಿಪುರ ಶಾಂತಿಗಾಗಿ ಕಾಯುತ್ತಾ ಒಂದು ವರ್ಷವಾಗಿದೆ, ಕಳೆದ 10 ವರ್ಷಗಳಿಂದ ರಾಜ್ಯವು ಶಾಂತಿಯುತವಾಗಿತ್ತು, ಆದರೆ ಇದ್ದಕ್ಕಿದ್ದಂತೆ ರಾಜ್ಯದಲ್ಲಿ ಮತ್ತೆ ಬಂದೂಕು ಸಂಸ್ಕೃತಿ ಹೆಚ್ಚಾಗಿದೆ, ಇದು ಮುಖ್ಯವಾಗಿದ್ದು ಆದ್ಯತೆಯ ಮೇಲೆ ಇಲ್ಲಿನ ಸಂಘರ್ಷವನ್ನು ಪರಿಹರಿಸಿ, ”ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ನಿವೃತ್ತ ಪೋಲಿಸ್ ಅಧೀಕ್ಷಕರ ಸಮಸ್ಯೆಗೆ ಪರಿಹಾರ ಒದಗಿಸಿದ ಗ್ರಾಹಕರ ಆಯೋಗ
2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಅವರು ತಮ್ಮ ಮೊದಲ ಹೇಳಿಕೆಯಲ್ಲಿ, "ಚುನಾವಣೆಯು ಒಮ್ಮತವನ್ನು ನಿರ್ಮಿಸುವ ಪ್ರಕ್ರಿಯೆಯಾಗಿದೆ. ಸಂಸತ್ತಿಗೆ ಎರಡು ಬದಿಗಳಿವೆ ಆದ್ದರಿಂದ ಯಾವುದೇ ಪ್ರಶ್ನೆಯ ಎರಡೂ ಅಂಶಗಳನ್ನು ಪ್ರಸ್ತುತಪಡಿಸಬಹುದು."ಎಂದು ಅವರು ಹೇಳಿದರು.
"ಜಗತ್ತಿನಾದ್ಯಂತ, ಸಮಾಜವು ಬದಲಾಗಿದೆ, ಇದು ವ್ಯವಸ್ಥಿತ ಬದಲಾವಣೆಗೆ ಕಾರಣವಾಗಿದೆ. ಅದು ಪ್ರಜಾಪ್ರಭುತ್ವದ ಮೂಲತತ್ವವಾಗಿದೆ.ಚುನಾವಣಾ ಪ್ರಚಾರದ ವೇಳೆ ಜನರು ಪರಸ್ಪರ ನಿಂದನೆ, ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುವ, ಸುಳ್ಳು ಸುದ್ದಿಗಳನ್ನು ಹರಡುವ ರೀತಿ ಸರಿಯಲ್ಲ .ನಾವು ಚುನಾವಣಾ ಉನ್ಮಾದವನ್ನು ತೊಡೆದುಹಾಕಬೇಕು ಮತ್ತು ದೇಶವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಯೋಚಿಸಬೇಕು" ಎಂದು ಮೋಹನ್ ಭಾಗವತ್ ಮನವಿ ಮಾಡಿದ್ದಾರೆ.
ಇಂಫಾಲ್ ಕಣಿವೆ ಮೂಲದ ಮೈಟೈಸ್ ಮತ್ತು ಬೆಟ್ಟದ ಮೂಲದ ಕುಕಿಗಳ ನಡುವಿನ ಜನಾಂಗೀಯ ಸಂಘರ್ಷವು 200 ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಗಿತ್ತು ಅಷ್ಟೇ ಅಲ್ಲದೆ ಕಳೆದ ವರ್ಷದಿಂದ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ