ನವದೆಹಲಿ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಹೇಳಿಕೆ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧನವಾಗಿದ್ದ ಪತ್ರಕರ್ತ ಪ್ರಶಾಂತ್ ಕನೂಜಿಯಾ ಬಿಡುಗಡೆಗೆ ಸುಪ್ರೀಂಕೋರ್ಟ್ ಮಂಗಳವಾರ ಆದೇಶಿಸಿದೆ.
ಕಾನೂನಿನ ಪ್ರಕಾರ ಪತ್ರಕರ್ತ ಪ್ರಶಾಂತ್ ಕನೂಜಿಯಾ ವಿರುದ್ಧದ ವಿಚಾರಣೆ ಮುಂದುವರೆಯಲಿ. ಆದರೆ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
ಪತಿಯ ಬಂಧನವನ್ನು ಪ್ರಶ್ನಿಸಿ, ಕನೂಜಿಯ ಪತ್ನಿ ಜಿಗಿಶಾ ಅರೋರಾ ಅವರು ಸುಪ್ರೀಂಕೋರ್ಟಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿ, ಕೂಡಲೇ ಪತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಒತ್ತಾಯಿಸಿದ್ದರು.
ಘಟನೆ ಬಗ್ಗೆ ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.