ನವದೆಹಲಿ : 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ದೆಹಲಿಯಲ್ಲಿ ನಡೆಯಿತು. ಅದ್ಭುತ ನಟನೆಗಾಗಿ ಸೂರ್ಯ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು. ಈ ಅದ್ಭುತ ಕ್ಷಣವನ್ನು ಸ್ಟಾರ್ ದಂಪತಿ ಪರಸ್ಪರ ಫೋಟೋದಲ್ಲಿ ಸೆರೆ ಹಿಡಿದು ಖುಷಿಪಟ್ಟರು.
ಇಂದು (ಸೆಪ್ಟೆಂಬರ್ 30) ದೆಹಲಿಯ ವಿಗ್ಯಾನ್ ಭವನದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜ್ಯೋತಿಕಾ ಅವರಿಗೆ ಸೂರರೈ ಪೊಟ್ರು ಚಿತ್ರಕ್ಕಾಗಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಲಭಿಸಿತು. ಕನ್ನಡದ ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರವಾಗಿ ತಲೆದಂಡ, ಅತ್ಯುತ್ತಮ ಆಡಿಯೋಗ್ರಫಿಗಾಗಿ ಡೊಳ್ಳು ಚಿತ್ರ, ಸಾಂಸ್ಕೃತಿಕ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ `ನಾದದ ನವನೀತ’ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಇನ್ನು ಪ್ರಶಸ್ತಿ ಸ್ವೀಕರಿಸಲು ದೇಶಾದ್ಯಂತದ ಚಲನಚಿತ್ರ ಕಲಾವಿದರು ಮತ್ತು ನಟರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಹಿರಿಯ ನಟಿ ಆಶಾ ಪರೇಖ್ ಅವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದರು.
ಇದನ್ನೂ ಓದಿ: ಕಚ್ಚಾ ತೈಲ ಬೆಲೆ ಹೆಚ್ಚಳ : ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ಸಂಭವ!
ಶಿವರಂಜನಿ ಸೇರಿದಂತೆ ಹಲವು ಚಲನಚಿತ್ರ ನಟರು 2020 ರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡರು. ನಿರ್ದೇಶಕರಾದ ಸುಧಾ ಕೊಂಗರ, ವಸಂತ್, ಮಂಡೇಲಾ ನಿರ್ದೇಶಕ ಮಡೋನ್ ಅಶ್ವಿನ್, ಸಂಗೀತ ಸಂಯೋಜಕ ಜಿ.ವಿ. ಪ್ರಕಾಶ್ ಕುಮಾರ್, ಎಸ್.ಥಮನ್ (ವೈಕುಂಡಪುರಂ ಲೋ - ತೆಲುಗು) ಮತ್ತಿತರರು ಭಾಗವಹಿಸಿ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.