ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳನ್ನು ಬೆತ್ತಲೆ ನಿಲ್ಲಿಸಿದ ಶಿಕ್ಷಕಿ

ಚಿತ್ತೂರು ಜಿಲ್ಲಾಧಿಕಾರಿ ಪಿ.ಎಸ್. ಪ್ರದ್ಯುಮ್ನ ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Last Updated : Dec 29, 2018, 02:17 PM IST
ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳನ್ನು ಬೆತ್ತಲೆ ನಿಲ್ಲಿಸಿದ ಶಿಕ್ಷಕಿ title=

ತಿರುಪತಿ: ಶಾಲೆಗೇ ತಡವಾಗಿ ಬಂದಿದ್ದಲ್ಲದೆ ಹೋಂ ವರ್ಕ್​ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು ನಾಲ್ಕು ವಿದ್ಯಾರ್ಥಿಗಳನ್ನು ಸಂಪೂರ್ಣ ಬೆತ್ತಲೆ ಮಾಡಿ ತರಗತಿ ರೂಂ ಹೊರಗಡೆ ನಿಲ್ಲಿಸಿ ಶಿಕ್ಷೆ ನೀಡಿದ ಅಮಾನುಷ ಘಟನೆ ಆಂಧ್ರ ಪ್ರದೇಶದ ತಿರುಪತಿಯ ಪಂಗಾನೂರ್​ ಖಾಸಗಿ ಶಾಲೆಯೊಂದರಲ್ಲಿ ಇತ್ತೀಚೆಗೆ ನಡೆದಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರ ತವರಾದ ಚಿತ್ತೂರಿನ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 9 ರಿಂದ 10 ವರ್ಷ ನಡುವಿನ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಿರುವುದು ವೀಡಿಯೋದಿಂದ ಸಾಬೀತಾಗಿದ್ದು, ಈ ವೀಡಿಯೋ ವೈರಲ್​ ಆಗಿದೆ. 

ಇನ್ನು ಘಟನೆಗೆ ಸಂಬಂಧಿಸಿದಂತೆ ಚಿತ್ತೂರು ಜಿಲ್ಲಾಧಿಕಾರಿ ಪಿ.ಎಸ್. ಪ್ರದ್ಯುಮ್ನ ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕಿ ವಿರುದ್ಧ ಕಠಿಣ ಕ್ರಮ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಘಟನೆ ಸಂಬಂಧಿಸಿದಂತೆ ಶಾಲೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 
 

Trending News