UP Assembly Elections 2022 - ಯುಪಿ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಶೇಕಡಾ 40 ರಷ್ಟು (Women Candidates) ಟಿಕೆಟ್ ನೀಡಲಿದೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ, ರಾಜ್ಯದ ಅಭಿವೃದ್ಧಿಗೆ ಮಹಿಳೆಯರ ಭಾಗವಹಿಸುವಿಕೆ ಮುಖ್ಯ ಎಂದು ತಾವು ಬಯಸುತ್ತಿರುವುದಾಗಿ ಅವರು ಹೇಳಿದ್ದಾರೆ. ಅಷ್ಟೇ ಅಲ್ಲ ಒಂದು ವೇಳೆ ಪಕ್ಷದಲ್ಲಿ ಕೇವಲ ತಮ್ಮ ಮಾತು ಮಾತ್ರ ನಡೆಯುತ್ತಿದ್ದರೆ, ತಾವು ಮಹಿಳೆಯರಿಗೆ ಶೇ.50 ರಷ್ಟು ಟಿಕೆಟ್ ನೀಡುತ್ತಿದ್ದೆ ಎಂದು ಅವರು ಹೇಳಿದ್ದಾರೆ. ಸೋನಭದ್ರ್ ಹಾಗೂ ಸೀತಾಪುರ್ ನಲ್ಲಿ ತಮ್ಮ ಬಂಧನದ ಕಾರಣವನ್ನು ಪ್ರಿಯಾಂಕಾ ಉಲ್ಲೇಖಿಸಿದ್ದಾರೆ.
The Congress party has decided that it will give 40% of the total election tickets to women in the state: Congress leader Priyanka Gandhi Vadra on 2022 Uttar Pradesh Assembly elections pic.twitter.com/WGPTSLbDcx
— ANI UP (@ANINewsUP) October 19, 2021
ಉತ್ತರ ಪ್ರದೇಶ ಚುನಾವಣೆಯಲ್ಲಿ (UP Elections 2022) ಶೇ.40ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲು
ಈ ವೇಳೆ ಕಾಂಗ್ರೆಸ್ (Congress) ಈ ಶೇ.40ರಷ್ಟು ಸ್ಥಾನಗಳನ್ನು ಪಂಜಾಬ್ ನಲ್ಲಿ ಮಹಿಳೆಯರಿಗೆ ಬಿಟ್ಟುಕೊಡಲಿದೆಯೇ? ಎಂಬ ಪ್ರಶ್ನೆಗೆ ಉತ್ತರ ನೀಡಿರುವ ಪ್ರಿಯಾಂಕಾ (Priyanka Gandhi), ತಾವು ಕೇವಲ ಉತ್ತರ ಪ್ರದೇಶ ರಾಜ್ಯದ ಉಸ್ತುವಾರಿಯಾಗಿದ್ದು, ತಮ್ಮ ಈ ನಿರ್ಣಯ ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದೆ ಮತ್ತು ಪಂಜಾಬ್ ಅಥವಾ ಇನ್ನಾವುದೇ ರಾಜ್ಯದ ಕುರಿತು ನಂತರ ಯೋಚಿಸಲಾಗುವುದು ಎಂದು ಹೇಳಿದ್ದಾರೆ. ಪ್ರಿಯಾಂಕಾ ಕೇವಲ ಪ್ರವಾಸಕ್ಕಾಗಿ ಉತ್ತರ ಪ್ರದೇಶಕ್ಕೆ ಆಗಮಿಸುತ್ತಾರೆ ಎಂಬ ವಿರೋಧಿ ಪಕ್ಷದ ಮುಖಂಡರ ಟೀಕೆಗಳಿಗೆ ಉತ್ತರಿಸಿರುವ ಪ್ರಿಯಾಂಕಾ, ವಿರೋಧಿ ಪಕ್ಷಗಳ ಮುಖಂಡರು ತಮ್ಮ ಕ್ರಿಯೇಟಿವಿಟಿಯನ್ನು ಬಳಸಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ-ಕಾಂಗ್ರೆಸ್, ಬಿಜೆಪಿ ಪರ್ಸೆಂಟೇಜ್ ಸರಕಾರ ; ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ
ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಕರಣ್ ಮೊರವಾಲ್ ಕುರಿತು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ ಪ್ರಿಯಾಂಕಾ ಮೌನ ತಾಳಿದ್ದಾರೆ. ಈ ವೇಳೆ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿ ಹೊತ್ತ ಸದಸ್ಯರು, ಇಂದು ಒಂದು ಐತಿಹಾಸಿಕ ನಿರ್ಣಯವನ್ನು ಕೈಗೊಳ್ಳಲಾಗಿರುವ ಕಾರಣ ನಾವು ಈ ವಿಷಯದ ಮೇಲೆಯೇ ನಮ್ಮ ಗಮನ ಕೇಂದ್ರೀಕರಿಸಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ-ಸಿದ್ದರಾಮಯ್ಯ: ಎಚ್ಡಿಳಕೆ ಆಕ್ರೋಶ
ಜಾತಿಯಲ್ಲ ಗೆಲುವಿನ ಸಾಮರ್ಥ್ಯವನ್ನು ಆಧರಿಸಿ ಟಿಕೆಟ್ ನೀಡಲಾಗುವುದು
ಈ ಬಾರಿಯ ಚುನಾವಣೆಯಲ್ಲಿ ನೀವು ಸ್ಪರ್ಧಿಸುವಿರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ, ಇದುವರೆಗೆ ನಿರ್ಣಯ ಕೈಗೊಂಡಿಲ್ಲ. ಆದರೆ, ಪರಿಸ್ಥಿತಿಯನ್ನು ಗಮನಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕಾ ಹೇಳಿದ್ದಾರೆ. ಇನ್ನೊಂದೆಡೆ ಮಹಿಳೆಯರಿಗೆ ಯಾವ ಆಧಾರದ ಮೇಲೆ ಟಿಕೆಟ್ ನೀಡಲಾಗುವುದು ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ, ಅಭ್ಯರ್ಥಿಗಳ ಗೆಲ್ಲುವ ಕ್ಷಮತೆಯನ್ನು ಆಧರಿಸಿ ಟಿಕೆಟ್ ನೀಡಲಾಗುವುದು ಎಂದಿದ್ದಾರೆ. ಈ ಸಂದರ್ಭದಲ್ಲಿ ಪ್ರಿಯಾಂಕಾ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಿಯಾಂಕಾ ಲಖೀಮ್ ಪುರ ಖೀರಿ ಹಿಂಸಾಚಾರ, ಗೃಹ ರಾಜ್ಯಸಚಿವ ಅಜಯ್ ಮಿಶ್ರಾ ರಾಜೀನಾಮೆ, ಜಮ್ಮು ಕಾಶ್ಮೀರದ ಪರಿಸ್ಥಿತಿ, ಚೀನಾ ಅತಿಕ್ರಮಣ ಹಾಗೂ ಹಣದುಬ್ಬರ ವಿಷಯವನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿದ್ದಾರೆ.
ಇದನ್ನೂ ಓದಿ-ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಟ್ವೀಟ್ ಡಿಲೀಟ್ ಮಾಡಿದ ಕರ್ನಾಟಕ ಕಾಂಗ್ರೆಸ್ ಘಟಕ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ