Yuvraj Singh Lok Sabha election 2024 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಬಿಜೆಪಿಯ ಸಿಇಸಿ ಸಭೆಯ ನಂತರ, ಮತ್ತೊಮ್ಮೆ ಬಿಜೆಪಿ ಅನೇಕ ಸೆಲೆಬ್ರಿಟಿಗಳನ್ನು ಚುನಾವಣೆಯಲ್ಲಿ ಸ್ಪರ್ಧೆಗಿಳಿಸಬಹುದು ಎಂದು ಹೇಳಲಾಗ್ತಿದೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಹೆಸರು ಕೂಡ ಕೇಳಿಬರುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಗುರುದಾಸ್‌ಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯುವರಾಜ್ ಸಿಂಗ್ ಕಣಕ್ಕಿಳಿಯಬಹುದು ಎನ್ನಲಾಗ್ತಿದೆ. ಈ ಬಗ್ಗೆ ಯುವರಾಜ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಯುವರಾಜ್ ಸಿಂಗ್ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿದ್ದು, ಗುರುದಾಸ್‌ಪುರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಯುವಿ ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣ X ಮೂಲಕ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಗೆಳೆಯನ ಪತ್ನಿಯನ್ನೇ ಪ್ರೀತಿಸಿ.. ಡಿವೋರ್ಸ್ ಬಳಿಕ ಮದುವೆಯಾದ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟರ್!
ಬಿಜೆಪಿಯ ಇತ್ತೀಚಿನ ಸಿಇಸಿ ಸಭೆಯ ನಂತರ, ಒಂದೆರಡು ದಿನಗಳಲ್ಲಿ ಬಿಜೆಪಿ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು ಎಂಬ ಸುದ್ದಿ ಸಹ ಹರಿದಾಡುತ್ತಿದೆ. ವರದಿ ಪ್ರಕಾರ, ಬಿಜೆಪಿ ಪ್ರಬಲ ಸ್ಥಾನದಲ್ಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಘೋಷಿಸಲಾಗುತ್ತದೆ. ಈ ಸ್ಥಾನಗಳಲ್ಲಿ ಒಂದು ಗುರುದಾಸ್‌ಪುರ. ಈ ಕ್ಷೇತ್ರದಿಂದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ಗೆ ಬಿಜೆಪಿ ಅವಕಾಶ ನೀಡಬಹುದು ಎಂಬ ಊಹಾಪೋಹಗಳಿದ್ದವು, ಆದರೆ ಯುವರಾಜ್ ಸಿಂಗ್ ಸ್ವತಃ ಇದನ್ನು ನಿರಾಕರಿಸಿದ್ದಾರೆ.
Contrary to media reports, I'm not contesting elections from Gurdaspur. My passion lies in supporting and helping people in various capacities, and I will continue to do so through my foundation @YOUWECAN. Let's continue making a difference together to the best of our abilities❤️
— Yuvraj Singh (@YUVSTRONG12) March 1, 2024
ಗುರುದಾಸ್‌ಪುರ ಲೋಕಸಭಾ ಕ್ಷೇತ್ರದಲ್ಲಿ ಸೆಲೆಬ್ರಿಟಿಗಳು ಯಾವಾಗಲೂ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಾರೆ. ಸದ್ಯ ನಟ ಸನ್ನಿ ಡಿಯೋಲ್ ಈ ಕ್ಷೇತ್ರದ ಸಂಸದರಾಗಿದ್ದಾರೆ. ಸನ್ನಿ ಡಿಯೋಲ್‌ಗೂ ಮುನ್ನ ವಿನೋದ್ ಖನ್ನಾ ಕೂಡ ಈ ಕ್ಷೇತ್ರದಿಂದ ಸಂಸದರಾಗಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲಿ, ವಿನೋದ್ ಖನ್ನಾ ನಂತರ ಬಿಜೆಪಿ ಈ ಕ್ಷೇತ್ರದಿಂದ ಸನ್ನಿ ಡಿಯೋಲ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಾಡಿತು. ಆ ಚುನಾವಣೆಯಲ್ಲಿ ಸನ್ನಿ ಡಿಯೋಲ್ ಗೆದ್ದರು.
ಇದನ್ನೂ ಓದಿ: ಲೋಕಸಭೆ ಅಖಾಡಕ್ಕೆ ಅಕ್ಷಯ್ ಕುಮಾರ್? ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಬಾಲಿವುಡ್ ಸ್ಟಾರ್?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.