ಸೆಂಟ್ರಲ್ ಕ್ಷೇತ್ರದಿಂದ 35 ಸಾವಿರ ಅಂತರದಲ್ಲಿ ಗೆಲ್ಲಲು ಅಮಿತ್ ಶಾ ಸೂಚನೆ: ಅರವಿಂದ ಬೆಲ್ಲದ್

Karnataka assembly Election 2023: ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್,  ಕಾಮನ್ ಆಗಿ ಅಮಿತ್ ಶಾ ಸಭೆ ನಡೆಸಿದ್ದಾರೆ. ಪ್ರಧಾನ ಮಂತ್ರಿಗಳ ಪ್ರವಾಸದ ವಿವವರಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಅವರ ಜತೆಗೆ ಚರ್ಚೆ ನಡೆಸಿದ್ದಾರೆಂದು ಹೇಳಿದರು.

Written by - Yashaswini V | Last Updated : Apr 25, 2023, 12:12 PM IST
  • ಸೆಂಟ್ರಲ್ ಕ್ಷೇತ್ರದಲ್ಲಿ ಯಾವ ಪ್ಯಾಕ್ಟರ್ ವರ್ಕ ಆಗಲ್ಲ.
  • ಅಮಿತ್ ಶಾ ಹೇಳಿದ್ದಾರೆ 35 ಸಾವಿರ ಲೀಡ್ ಆಗಬೇಕು ಅಂತಾ ಅಮಿತ್ ಶಾ ಹೇಳಿದ್ದಾರೆ.
  • ಹೀಗಾಗಿ ಕನಿಷ್ಠಪಕ್ಷ 35 ರಿಂದ 40 ಸಾವಿರ ಅಂತರದಲ್ಲಿ ಮಹೇಶ ಟೆಂಗಿನಕಾಯಿ ಗೆಲ್ಲಲದ್ದಾರೆ
ಸೆಂಟ್ರಲ್ ಕ್ಷೇತ್ರದಿಂದ 35 ಸಾವಿರ ಅಂತರದಲ್ಲಿ ಗೆಲ್ಲಲು ಅಮಿತ್ ಶಾ ಸೂಚನೆ: ಅರವಿಂದ ಬೆಲ್ಲದ್ title=

Karnataka assembly Election: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಚುನಾವಣಾ ಚಾಣಕ್ಯ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಯಲ್ಲಿಂದು ಸಾಲು ಸಾಲು ಸಭೆ ನಡೆಸುತ್ತಿದ್ದು ಚುನಾವಣಾ ರಣತಂತ್ರ ರೂಪಿಸುತ್ತಿದ್ದಾರೆ. ಈ ಕುರಿತಂತೆ, ಮಾತನಾಡಿರುವ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸೆಂಟ್ರಲ್ ಕ್ಷೇತ್ರದಿಂದ 35 ಸಾವಿರ ಅಂತರದಲ್ಲಿ ಗೆಲ್ಲಲು ಅಮಿತ್ ಶಾ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. 

ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್,  ಕಾಮನ್ ಆಗಿ ಅಮಿತ್ ಶಾ ಸಭೆ ನಡೆಸಿದ್ದಾರೆ. ಪ್ರಧಾನ ಮಂತ್ರಿಗಳ ಪ್ರವಾಸದ ವಿವವರಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಅವರ ಜತೆಗೆ ಚರ್ಚೆ ನಡೆಸಿದ್ದಾರೆಂದು ಹೇಳಿದರು.

ಇದನ್ನೂ ಓದಿ- "ನನ್ನನ್ನು ಸೋಲಿಸಿದವರನ್ನು ಕಣ್ಣೀರು ಹಾಕಿಸಿದಾಗ ಮಾತ್ರ ನನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ"

ನಗರದ ಖಾಸಗಿ ಹೊಟೇಲ್ ನಲ್ಲಿ ಅಮಿತ್ ಶಾ ಭೇಟಿ ಮಾಡಿ ಮಾತನಾಡಿದ ನಂತರ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಸೆಂಟ್ರಲ್ ಕ್ಷೇತ್ರದ ಸ್ಟ್ಯಾಟರ್ಜಿ ವಿಚಾರಕ್ಕೆ ಸಂಬಂಧಿಸಿದಂತೆಯೂ ಪ್ರತಿಕ್ರಿಯಿಸಿದರು. ಸೆಂಟ್ರಲ್ ಕ್ಷೇತ್ರದಲ್ಲಿ ಸ್ಟ್ಯಾಟರ್ಜಿ ಅವಶ್ಯಕತೆ ಇಲ್ಲ.  ಜನರು, ಕಾರ್ಯಕರ್ತರು, ಮತದಾರರೆ ಡಿಸೈಡ್  ಮಾಡಿದ್ದಾರೆ, ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಗೆಲುವು ಸಾಧಸಲಿದೆ ಎಂದರು.

ಇದನ್ನೂ ಓದಿ- ಬಿಜೆಪಿಗೆ ಮುಸ್ಲಿಂ ಮತಗಳು ಬೇಕಿಲ್ಲ ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದು ನಿಜವಾ?

ಲಿಂಗಾಯತರಿಗೆ ಬಿಜೆಪಿ ಅನ್ಯಾಯ ವಿಚಾರಕ್ಕೆ, ಐವತ್ತು ವರ್ಷದ ಕರ್ನಾಟಕದ ಇತಿಹಾಸದಲ್ಲಿ ಕೇವಲ 9ತಿಂಗಳ ಅವಧಿಗೆ ವೀರೇಂದ್ರ ಪಾಟೀಲರನ್ನ ಮುಖ್ಯಮಂತ್ರಿ ಮಾಡಿ, ಅವರನ್ನ ಮನೆಗೆ ಕಳಹುಸಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಹಕ್ಕಿಕತ್ ಏನಿದೆ ಅಂತಾ ಕರ್ನಾಟಕದ ಜನತೆಗ ಗೊತ್ತಿದೆ. ಇದರ ಬಗ್ಗೆ ಯಾರು ಸಿರಿಯಸ್‌ ಆಗಿ ತೆಗದುಕೊಳ್ಳಲ್ಲ, ಶೆಟ್ಟರ್ ಪ್ಯಾಕ್ಟರ್ ವರ್ಕ್ ವಿಚಾರಕ್ಕೆ ಸೆಂಟ್ರಲ್ ಕ್ಷೇತ್ರದಲ್ಲಿ ಯಾವ ಪ್ಯಾಕ್ಟರ್ ವರ್ಕ ಆಗಲ್ಲ. ಅಮಿತ್ ಶಾ ಹೇಳಿದ್ದಾರೆ 35 ಸಾವಿರ ಲೀಡ್ ಆಗಬೇಕು ಅಂತಾ ಅಮಿತ್ ಶಾ ಹೇಳಿದ್ದಾರೆ.  ಹೀಗಾಗಿ ಕನಿಷ್ಠಪಕ್ಷ 35 ರಿಂದ 40 ಸಾವಿರ ಅಂತರದಲ್ಲಿ ಮಹೇಶ ಟೆಂಗಿನಕಾಯಿ ಗೆಲ್ಲಲದ್ದಾರೆ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News