ನವದೆಹಲಿ: ನಂದಿನಿ ನಂ.1 ಬ್ರ್ಯಾಂಡ್ ಆಗಿದ್ದು, ಅಮುಲ್ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಅಮುಲ್ ಹಾಲು ಮಾರಾಟ ತಡೆಗಾಗಿ ನಡೆಯುತ್ತಿರುವ ಹೋರಾಟದ ವಿಚಾರವಾಗಿ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು.
ನಾವು ಸಹ ಬೇರೆ ರಾಜ್ಯಗಳಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಮಾಡಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಭ್ಯರ್ಥಿಗಳ ಬಗ್ಗೆ ಚರ್ಚೆ
ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರವಾಗಿ ಚರ್ಚೆ ಮಾಡಲಾಗುವುದು. ನಾಳೆ ಸಂಜೆ 5 ಗಂಟೆಗೆ ಸಂಸದಿಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದರು.
ಇದನ್ನೂ ಓದಿ: ಟಿಕೆಟ್ ವಿಚಾರದಲ್ಲಿ ಸವದಿ ವಿರುದ್ಧ ತಿರುಗಿ ಬಿದ್ದ ಸ್ವಾಮೀಜಿಗಳು
ಸಭೆಯಲ್ಲಿ ನಿರ್ಧಾರ
ಕೆಲ ಎಂಎಲ್ಸಿ ಮತ್ತು ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಚರ್ಚೆಯ ಬಳಿಕ ಎಷ್ಟು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ನಿರ್ಧಾರವಾಗಲಿದೆ ಎಂದು ತಿಳಿಸಿದರು.
ನಮ್ಮ ಶಕ್ತಿ ಮೇಲೆ ನಂಬಿಕೆ ಇದೆ
ಕಾಂಗ್ರೆಸ್ನಲ್ಲಿ ಟಿಕೇಟ್ ಹಂಚಿಕೆಯ ಗೊಂದಲದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಶಕ್ತಿಯ ಮೇಲೆ ನಮಗೆ ನಂಬಿಕೆ ಇದೆ. ಸಹಜವಾಗಿಯೇ ಅದರ ಲಾಭ ಆಗಲಿದೆ’ ಎಂದರು.
ಕಾಂಗ್ರೆಸ್ಗೆ ನಡುಕ ಹುಟ್ಟಿದೆ!
ನಟ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ‘ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿತ್ತು. ಅಂಬರೀಶ್ ಪ್ರಚಾರ ಮಾಡಲಿಲ್ಲವೇ? ಶಾಸಕರಾಗಿರಲಿಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿಗೆ ಬೆಂಬಲ ನೀಡುವ ಮುಂಚೆ ಅದರಿಂದಾಗೊ ಎಲ್ಲಾ ಪರಿಣಾಮದ ಬಗ್ಗೆ ಮಾಹಿತಿ ಇದೆ. ಸುದೀಪ್ ಅವರು ನಮಗೆ ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್ಗೆ ನಡುಕ ಹುಟ್ಟಿದೆ ಎಂದರು.
ಇದನ್ನೂ ಓದಿ: Karnataka elections: ‘ಕೇಸರಿ’ ಕಲಿಗಳನ್ನು ಅಂತಿಮಗೊಳಿಸಲು ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ
ಚರ್ಚೆಯಲ್ಲಿ ತಿಳಿಯಲಿದೆ
ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ‘ಆ ತರಹದ ಲೆಕ್ಕಾಚಾರ ಚರ್ಚೆಯಲ್ಲಿ ಮಾಡಿದಾಗಲೇ ತಿಳಿಯುವುದು’ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.