ಹಾವೇರಿ: ಈ ಬಾರಿ ರಾಜ್ಯದಲ್ಲಿ ಬಿಜೆಪಿಯ ಸಂಪೂರ್ಣ ಬಹುಮತದ ಸರ್ಕಾರ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಶಿಗ್ಗಾವಿಯಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಗೆಲುವಿಗಾಗಿ ಪ್ರತಿಯೊಬ್ಬರೂ ಮತದಾನ ಮಾಡಬೇಕು’ ಎಂದು ಮನವಿ ಮಾಡಿಕೊಂಡರು.
ರಾಜ್ಯದಾದ್ಯಂತ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಬಿಜೆಪಿಯ ಪ್ರಚಾರದ ರೀತಿಗೆ ಜನರಿಂದ ವ್ಯಕ್ತವಾದ ಪ್ರತಿಕ್ರಿಯೆಯಿಂದ ನನಗೆ ಖುಷಿಯಾಗಿದೆ. ಕರ್ನಾಟಕ ರಾಜ್ಯದ ಸಂಪೂರ್ಣ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಮನೆಯಿಂದ ಹೊರಬಂದು ಹಕ್ಕು ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ ಎಂದರು.
ಇದನ್ನೂ ಓದಿ: 1.50 ಲಕ್ಷ ರೂ. ಖರ್ಚು ಮಾಡಿ ಮತ ಹಾಕಲು ಬಂದ ವ್ಯಕ್ತಿಗೆ ನಿರಾಸೆ..! ವೋಟರ್ ಲಿಸ್ಟ್ನಿಂದ ಹೆಸರೆ ಡಿಲೀಟ್
ಜನರ ಬಳಿ ನಾನು ಮತ್ತೊಮ್ಮೆ ಕೇಳುತ್ತಾ ಇದ್ದೇನೆ, ದಯವಿಟ್ಟು ಮನೆಯಿಂದ ಹೊರ ಬಂದು ಮತ ಚಲಾಯಿಸಿರಿ. ಈ ಮೂಲಕ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಿರಿ. ನಿಮ್ಮ ಒಂದೇ ಒಂದು ಮತ ಬಹಳ ದೊಡ್ಡದು. ಒಂದು ಕಡೆ ಅಭಿವೃದ್ಧಿ,ಇನ್ನೊಂದು ಕಡೆ ಸುಳ್ಳು-ಪೊಳ್ಳು ಇದ್ದು. ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಅದರ ಹೊಣೆ ನಮ್ಮ ಮೇಲೆ ಬಿತ್ತು. ಕೋವಿಡ್ ಸಂಕಷ್ಟದ ಸಂದರ್ಭವನ್ನು ನಾವು ಸಮರ್ಥವಾಗಿ ನಿಭಾಯಿಸಿದ್ದೇವೆ. ಆರ್ಥಿಕವಾಗಿ ಉತ್ತೇಜನ ನೀಡಿ ಹಲವಾರು ಹೊಸ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಹೀಗಾಗಿ ಅಭಿವೃದ್ಧಿ ದೃಷ್ಟಿಯನ್ನಿಟ್ಟುಕೊಂಡು ನೀವು ಮತ ಚಲಾಯಿಸಬೇಕು ಎಂದು ಹೇಳಿದರು.
ಸುಳ್ಳು ಆರೋಪ ಮತ್ತು ಸುಳ್ಳು ಗ್ಯಾರಂಟಿಗೆ ರಾಜ್ಯದ ಜನರು ಬೆಂಬಲ ನೀಡುವುದಿಲ್ಲ. ರಾಜ್ಯದ ಅಭಿವೃದ್ಧಿಗೆ ಜನರು ಮತ ನೀಡುತ್ತಾರೆ. ರಾಜ್ಯದ ಒಬ್ಬ ನಾಗರೀಕನಾಗಿ ನಾನು ಮತದಾನ ಮಾಡಿದ್ದೇನೆ. ಕಾಂಗ್ರೆಸ್ನವರ ಸುಳ್ಳು ಭರವಸೆಗಳನ್ನು ನಂಬಬೇಡಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸೂಕ್ತ ಅಭ್ಯರ್ಥಿಗಳಿಗೆ ನೀವು ಮತ ಹಾಕಿ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.