ಬೆಂಗಳೂರು : ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ರಾಮನಗರ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿದಿರುವ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಅವರು ಜೆಡಿಎಸ್ ವರಿಷ್ಠ ದೇವೇಗೌಡರಿಂದ ಬಿ ಫಾರಂ ಪಡೆದುಕೊಂಡಿದ್ದಾರೆ. ಈ ವೇಳೆ ನಿಖಿಲ್ ಕುಮಾರಸ್ವಾಮಿ ಭಾವುಕಾರಾಗಿ ಕಣ್ಣೀರು ಹಾಕಿದ್ದಾರೆ.
ರಾಮನಗರ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಈ ಹಿನ್ನೆಯಲ್ಲಿ ಇಂದು ರಾಮನಗರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರಿಂದ ಬಿ ಫಾರಂ ಪಡೆದುಕೊಂಡರು. ಈ ವೇಳೆ ಹೆಚ್ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಪತ್ನಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಕಾಂಗ್ರೆಸ್‌ಗೆ ಯಾರೇ ಹೋದ್ರೂ ನಮ್ಮ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ..!
ದೇವೇಗೌಡರಿಂದ ಬಿ ಫಾರಂ ಪಡೆಯುತ್ತಿದ್ದ ವೇಳೆ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದು ಕಣ್ಣೀರು ಹಾಕಿದ್ದಾರೆ.
#KarnatakaPollsWithTNIE @JanataDal_S candidate from Ramanagara constituency Nikhil Kumaraswamy seeks blessings from grandfather @H_D_Devegowda before filing nomination papers @XpressBengaluru @ramupatil_TNIE @Cloudnirad pic.twitter.com/8iIFROqFCe
— MG Chetan (@mg_chetan) April 17, 2023
ಇದನ್ನೂ ಓದಿ : Karnataka election 2023: ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ವಿರುದ್ದ ಬಿಸಿ ಪಾಟೀಲ್ ವಾಗ್ದಾಳಿ!
ನಾಮಪತ್ರ ಸಲ್ಲಿಕೆಗೆ ತೆರಳುವ ಮುನ್ನ ತಾತ ದೇವೇಗೌಡರು ಮತ್ತು ಅಜ್ಜಿ ಚೆನ್ನಮ್ಮ ಅವರಿಂದ ನಿಖಿಲ್ ಆಶೀರ್ವಾದ ಪಡೆದುಕೊಂಡಿದ್ದಾರೆ.
ಇದಕ್ಕೂ ಮುನ್ನ ಬೆಳಗ್ಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯ, ಚರ್ಚ್ ಹಾಗೂ ದರ್ಗಾದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಮೆರವಣಿಗೆ ಮೂಲಕ ತೆರಳಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple LinGallery Hindi Import - News k - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ