ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆಲ್ಲುವ ಸ್ಪಷ್ಟ ಬಹುಮತ ಪಡೆದರೂ ಸಿಎಂ ಆಯ್ಕೆ ಕಗ್ಗಂಟು ಇನ್ನೂ ಬಗೆಹರಿದಿಲ್ಲ. ಸಿಎಂ ಪಟ್ಟಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ.
ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಲು ನಾನೇ ಕಾರಣ, ಹೀಗಾಗಿ ನಾನೇ ಸಿಎಂ ಆಗಬೇಕೆಂದು ಡಿಕೆಶಿ ಪಟ್ಟು ಹಿಡಿದಿದ್ದಾರೆ. ಅದೇ ರೀತಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲು ನಾನೇ ಮುಖ್ಯ ಕಾರಣ ನಾನೇ ಸಿಎಂ ಎಂದು ಸಿದ್ದರಾಮಯ್ಯ ಸಹ ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ: Karnataka Elections 2023: ದೆಹಲಿ ಅಂಗಳಕ್ಕೆ ತಲುಪಿದ ಸಿಎಂ ಆಯ್ಕೆ!
ಈ ನಡುವೆ ಸಿಎಂ ಆಯ್ಕೆ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ‘ಶಾಸಕರ ಅಭಿಪ್ರಾಯ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ’ವೆಂದು ಹೇಳಿದ್ದಾರೆ. ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.
ದೇಶಕ್ಕೆ ಮಾದರಿ ಆಡಳಿತ ನೀಡುವ ವ್ಯಕ್ತಿ ಹಾಗೂ ಪಕ್ಷವನ್ನು ಉಳಿಸುವವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಅಭಿಪ್ರಾಯ. ಹೈಕಮಾಂಡ್ ನನ್ನ ಅಭಿಪ್ರಾಯ ಕೇಳಿದರೆ ಹೇಳುತ್ತೇನೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ(CLP) ಸಭೆಯಲ್ಲಿ ಒಂದು ಸಾಲಿನ ನಿರ್ಣಯ ತೆಗೆದುಕೊಂಡಿದ್ದೇವೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: Karnataka Elections 2023: ಸಿದ್ದು vs ಡಿಕೆಶಿ, ಯಾರಿಗೆ ಒಲಿಯಲಿದೆ ಸಿಎಂ ಪಟ್ಟ?
ಬಿಜೆಪಿಯವರಂತೆ ತಿಂಗಳುಗಳ ಕಾಲ ಸಿಎಂ ಆಯ್ಕೆ ಮಾಡದೆ ಇರುವ ಸಂಪ್ರದಾಯ ನಮ್ಮಲ್ಲಿ ಇಲ್ಲ. ಶಾಸಕರ ಅಭಿಪ್ರಾಯ ತೆಗೆದುಕೊಂಡು ಮುಖ್ಯಮಂತ್ರಿ ಮಾಡುವುದು ನಮ್ಮ ಸಂಪ್ರದಾಯ. ನಾಗಪುರದಿಂದ ಬಂದವರು ಸಿಎಂ ಆಯ್ಕೆ ಮಾಡುವ ಸಂಸ್ಕೃತಿ ನಮ್ಮಲ್ಲಿಲ್ಲವೆಂದು ಬೆಂಗಳೂರಿನಲ್ಲಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.