Karnataka Budget 2023-24: ಶಾಲಾ ಶಿಕ್ಷಣಕ್ಕೆ ಉತ್ತೇಜನ ನೀಡಿದ ಸಿಎಂ ಸಿದ್ದು ಬಜೆಟ್ 

ತಮ್ಮ ದಾಖಲೆಯ 14 ನೇ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರು ಪ್ರಾಥಮಿಕ ಹಾಗೂ ಫ್ರೌಡಶಾಲಾ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡಿದ್ದಾರೆ.

Written by - Bhavya Sunil Bangera | Edited by - Manjunath N | Last Updated : Jul 7, 2023, 01:18 PM IST
  • ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ
  • 47,272 ಶಾಲೆಗಳು ಹಾಗೂ 1231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ.ಅನುದಾನವನ್ನು ಮೀಸಲಿರಿಸಿದ್ದಾರೆ
  • 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ.ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು
Karnataka Budget 2023-24: ಶಾಲಾ ಶಿಕ್ಷಣಕ್ಕೆ ಉತ್ತೇಜನ ನೀಡಿದ ಸಿಎಂ ಸಿದ್ದು ಬಜೆಟ್  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ತಮ್ಮ ದಾಖಲೆಯ 14 ನೇ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರು ಪ್ರಾಥಮಿಕ ಹಾಗೂ ಫ್ರೌಡಶಾಲಾ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡಿದ್ದಾರೆ.

ಇದಕ್ಕೆ ಪೂರಕ ಎನ್ನುವಂತೆ ಈಗ ಬಜೆಟ್ ನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ  ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ ದಿಂದ ; 45,000 ರೂ. ಗಳವರೆಗೆ ಹೆಚ್ಚಿಸಿ 47,272 ಶಾಲೆಗಳು ಹಾಗೂ 1231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ.ಅನುದಾನವನ್ನು ಮೀಸಲಿರಿಸಿದ್ದಾರೆ.

ಇದನ್ನು ಓದಿ: ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ-ಎದೆ ಎತ್ತಿ ಉತ್ತರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಷ್ಟೇ ಅಲ್ಲದೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅದರಲ್ಲೂ  1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು. ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ.ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.

ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಒತ್ತು ನೀಡಿರುವ ಸಿಎಂ ಸಿದ್ದು ತಮ್ಮ ಬಜೆಟ್ ನಲ್ಲಿ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು 'ಮರುಸಿಂಚನ' ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News