ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.: ಸಿಎಂ ಕುಮಾರಸ್ವಾಮಿ

ರಾಯಚೂರಿನ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ನಲ್ಲಿ ರಾಯಚೂರು ವಿವಿ‌ ಕುರಿತು ಸುಗ್ರಿವಾಜ್ಞೆ ಮಾಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ವಿವರಣೆಯನ್ನು ರಾಜ್ಯಪಾಲರಿಗೆ ಕೇಳಿದ್ದು, ಆ ಕುರಿತು ಮನವೋಲಿಸಲಾಗುವುದು- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Last Updated : Jun 27, 2019, 07:08 AM IST
ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.: ಸಿಎಂ ಕುಮಾರಸ್ವಾಮಿ title=

ರಾಯಚೂರು: ಈಗಾಗಲೇ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಂಬಂಧಿಸಿದಂತೆ ಆದ್ಯತೆ ಮೇರೆಗೆ ಯಾವ ಕೆಲಸಗಳಿಗೆ ಅದ್ಯತೆ ನೀಡಬೇಕು ಎಂಬ ಮಾಹಿತಿಯನ್ನು ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಂದ ಪಡೆದುಕೊಂಡಿದ್ದು, ಗ್ರಾಮವಾಸ್ತವ್ಯದ ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳಿಗಾಗಿ 3 ಸಾವಿರ ಕೋಟಿ ರೂ. ವೆಚ್ಚದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ರಾಯಚೂರಿನ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ನಲ್ಲಿ ರಾಯಚೂರು ವಿವಿ‌ ಕುರಿತು ಸುಗ್ರಿವಾಜ್ಞೆ ಮಾಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ವಿವರಣೆಯನ್ನು ರಾಜ್ಯಪಾಲರಿಗೆ ಕೇಳಿದ್ದು, ಆ ಕುರಿತು ಮನವೋಲಿಸಲಾಗುವುದು.
ಐಐಐಟಿಗೆ ಭೂಮಿ ನೀಡುವುದು ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.

ತುಂಗಭದ್ರಾ ಜಲಾಶಯದ 31 ಟಿಎಂಸಿ ಹೂಳು ತುಂಬಿಕೊಂಡಿದ್ದು, ಅದು ತೆಗೆಯುವುದು ಅಸಾಧ್ಯ ಎಂಬ ವರದಿ ಹಿನ್ನೆಲೆಯಲ್ಲಿ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಿಪಿಎಆರ್ ರೂಪಿಸುವುದಕ್ಕೆ ಸೂಚನೆ ನೀಡಲಾಗಿದೆ.

ಅಭಿವೃದ್ಧಿಗೆ ದುಡ್ಡಿನ ಕೊರತೆ ಇಲ್ಲ; 
ಅಭಿವೃದ್ಧಿ ವಿಷಯದಲ್ಲಿ ನಮ್ಮ ಸರಕಾರ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಅಭಿವೃದ್ಧಿಗೆ ದುಡ್ಡಿನ ಕೊರತೆ ಇಲ್ಲ, ಸಾಲಮನ್ನಾಕ್ಕಾಗಿ ಹಣವನ್ನು ವಿವಿಧ ಇಲಾಖೆಗಳಿಗೆ ಹಣ ಕಡಿತಮಾಡಲಾಗಿದೆ ಎಂಬುದು ಸುಳ್ಳು. ಸಣ್ಣ ಮತ್ತು ಬೃಹತ್ ‌ನೀರಾವರಿಗೆ ಈ ವರ್ಷ 19 ಸಾವಿರ ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ 6.5ಕೋಟಿ ಜನರು ನನ್ನ ಅಣ್ಣ ತಮ್ಮಂದಿರು ಅಕ್ಕ ತಂಗಿಯರಿದ್ದಾರೆ. ಬಿಜೆಪಿಯವರ ಹೆಸರು ಹೇಳಿಕೊಂಡು‌ ಕೆಲಸ ಮಾಡುವ ಅಗತ್ಯ ನನಗಿಲ್ಲ. ಈ ಮುಂಚೆ ಅವರದೇ ಸರಕಾರವಿದ್ದಾಗ ಏನು ಮಾಡಿದ್ದರು...? ಎಂದು ಪ್ರಶ್ನಿಸಿದರು.

ದೇವದುರ್ಗ ತಾಲೂಕಿಗೆ ನೀರಾವರಿಯನ್ನು ಹೆಚ್.ಡಿ.ದೇವೇಗೌಡರು ಒದಗಿಸಿದ್ದ ಸಂದರ್ಭದಲ್ಲಿ ಆರೋಪ ಮಾಡುವ ವ್ಯಕ್ತಿ ಹುಟ್ಟಿದ್ದನೋ ಗೊತ್ತಿಲ್ಲ ಎಂದರು. ರಾಯಚೂರು ಜಿಲ್ಲೆಗೆ 182 ಕೋಟಿ ರೂ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗಿದೆ. ನಮ್ಮ ಅಭಿವೃದ್ಧಿ ಕಾರ್ಯಕ್ರಮಗಳು ಅನುಷ್ಠಾನಕ್ಕೆ ಬಂದು‌ ಜನರಿಗೆ ಕಾಣುವುದಕ್ಕೆ ಇನ್ನೂ 4ತಿಂಗಳು ಬೇಕು ಎಂದು ಹೇಳಿದ ಅವರು, ಆರೋಪ ಮಾಡುವವರು ಸುಖಾಸುಮ್ಮನೆ ಆರೋಪ ಮಾಡಬಾರದು ಗ್ರಾಮವಾಸ್ತವ್ಯಕ್ಕೆ ಸಂಬಂಧಿಸಿದಂತೆ ವಿನಾಕಾರಣ ಟೀಕೆ, ಆರೋಪಗಳು ಮಾಡುತ್ತಿದ್ದು, ಅವರನ್ನು ವಿಧಾನಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗುವುದು ಎಂದರು.

ವಿವಿಧ ಇಲಾಖೆಗಳ 61 ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಪಟ್ಟಿ ಪಡೆದುಕೊಳ್ಳಲಾಗಿದ್ದು, ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ತಿಳಿಸಿದ ಸಿಎಂ,ಶಾಶ್ವತವಾದ ಕುಡಿಯುವ ನೀರಿನ ಯೋಜನೆಗಳು ಇಡೀ ರಾಜ್ಯಾದ್ಯಂತ ಆಗಬೇಕು ಎಂಬುದು ನಮ್ಮ ಬಯಕೆ ಎಂದು ತಿಳಿಸಿದರು.

ಗ್ರಾಮವಾಸ್ತವ್ಯ ಕಾರ್ಯಕ್ರಮ ಮೈತ್ರಿ ಸರಕಾರದ್ದೇ ಹೊರತು ಯಾವುದೇ ಪಕ್ಷಕ್ಕೆ ಸಂಬಂಧಿಸಿಲ್ಲ ಎಂಬುದನ್ನು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

Trending News