COVID-19 Positive : ರಾಜ್ಯದ ವಸತಿ ಶಾಲೆಯೊಂದರಲ್ಲಿ 32 ವಿದ್ಯಾರ್ಥಿಗಳಿಗೆ 'ಕೊರೋನಾ ಪಾಸಿಟಿವ್'!

ಸಧ್ಯ ಇವರೆಲ್ಲರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯಲ್ಲಿ ಒಟ್ಟು 270 ವಿದ್ಯಾರ್ಥಿಗಳಿದ್ದು, ಅವರೆಲ್ಲರಿಗೂ ಕೋವಿಡ್ 19 ಪರೀಕ್ಷೆ ಮಾಡಲಾಗಿದೆ.

Written by - Channabasava A Kashinakunti | Last Updated : Oct 28, 2021, 01:00 PM IST
  • ಕೊಡಗು ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ 32 ವಿದ್ಯಾರ್ಥಿಗಳಿಗೆ ಕೋವಿಡ್-19 ಪಾಸಿಟಿವ್
  • ಒಂದು ವಾರದ ಹಿಂದೆ ಶಾಲೆಯ ಮಕ್ಕಳಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
  • ಶಾಲೆಯಲ್ಲಿ ಒಟ್ಟು 270 ವಿದ್ಯಾರ್ಥಿಗಳಿದ್ದು, ಅವರೆಲ್ಲರಿಗೂ ಕೋವಿಡ್ 19 ಪರೀಕ್ಷೆ
COVID-19 Positive : ರಾಜ್ಯದ ವಸತಿ ಶಾಲೆಯೊಂದರಲ್ಲಿ 32 ವಿದ್ಯಾರ್ಥಿಗಳಿಗೆ 'ಕೊರೋನಾ ಪಾಸಿಟಿವ್'! title=

ಬೆಂಗಳೂರು :  ಕೊಡಗು ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ 32 ವಿದ್ಯಾರ್ಥಿಗಳಿಗೆ ಕೋವಿಡ್-19 ಪಾಸಿಟಿವ್(COVID-19 Positive) ಬಂದಿದೆ. ಒಂದು ವಾರದ ಹಿಂದೆ ಶಾಲೆಯ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಲ್ಲಿ 10 ಹೆಣ್ಣು ಮಕ್ಕಳು ಮತ್ತು 22 ಗಂಡು ಮಕ್ಕಳನ್ನ ಕೊರೋನಾ  ಪರೀಕ್ಷೆಗೆ ಒಳಪಡಿಸಲಾಗಿತ್ತು.  

ಜಿಲ್ಲೆಯ ಮಡಿಕೇರಿಯ ಜವಾಹರ್ ನವೋದಯ ವಿದ್ಯಾಲಯ(Jawahar Navodaya Vidayalaya in Madikeri)ದಲ್ಲಿ ಈ ಘಟನೆ ನಡೆದಿದೆ. 10 ವಿದ್ಯಾರ್ಥಿಗಳಲ್ಲಿ ರೋಗಲಕ್ಷಣಗಳನ್ನು ಹೊಂದಿದ್ದರೆ, 22 ವಿದ್ಯಾರ್ಥಿಗಳು ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲ. ಶಾಲೆಯ ಒಬ್ಬ ಸಿಬ್ಬಂದಿಗೆ ಕೂಡ ಕೊರೋನಾ ಪಾಸಿಟಿವ್ ಮತ್ತು ರೋಗಲಕ್ಷಣವನ್ನು ಹೊಂದಿದ್ದಾರೆ.

ಇದನ್ನೂ ಓದಿ : HD Kumaraswamy: ಎಂಇಎಸ್ ವಿನಾಕಾರಣ ಕನ್ನಡಿಗರನ್ನು ಕೆಣಕುತ್ತಿದೆ- ಸಾಮಾಜಿಕ ಮಾಧ್ಯಮದಲ್ಲಿ ಎಚ್ಡಿಕೆ ಗುಡುಗು

ಸಧ್ಯ ಇವರೆಲ್ಲರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯಲ್ಲಿ ಒಟ್ಟು 270 ವಿದ್ಯಾರ್ಥಿಗಳಿದ್ದು, ಅವರೆಲ್ಲರಿಗೂ ಕೋವಿಡ್ 19 ಪರೀಕ್ಷೆ(COVID-19 Test) ಮಾಡಲಾಗಿದೆ.

ಜಿಲ್ಲಾಧಿಕಾರಿ(Kodagu District Collector), ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇಂದು ಶಾಲೆಗೆ ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹೆಚ್ಚಿನ ಸೋಂಕು ತಡೆಗಟ್ಟಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ : "ಕಲೆ, ಸಂಸ್ಕೃತಿಗಳನ್ನು ಉಳಿಸುವುದರ ಮೂಲಕ ಕನ್ನಡವನ್ನು ಬೆಳೆಸಬೇಕು"

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿ

Trending News