ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಎರಡೂ ಕಡೆಗಳಲ್ಲಿರುವ ರಸ್ತೆಗಳ ವಿಸ್ತರಣೆಗಾಗಿ ಮಹಾರಾಜ ಯದುವೀರ್ ಒಡೆಯರ್ ಮೈದಾನದ ಖಾಲಿ ಭೂಮಿಯನ್ನು ಬಿಟ್ಟುಕೊಡುವ ಮೂಲಕ ಹೃದಯ ವೈಶಾಲ್ಯತೆ ಮೆರೆಯಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಮಹಾರಾಜರು ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿಫಲ ಅಪೇಕ್ಷೆಯಿಲ್ಲದೆ ರಸ್ತೆ ಅಗಲೀಕರಣಕ್ಕೆ ನೆರವಾಗುವ ಮೂಲಕ ಜನಾನುರಾಗಿಗಳಾಗಬೇಕು ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ.ಒತ್ತಾಯಿಸಿದರು.
ಈ ಹಿಂದೆ ಮೈಸೂರು ರಾಜ್ಯವನ್ನು ಆಳುತ್ತಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಕೆಆರ್ಎಸ್ ಜಲಾಶಯ ನಿರ್ಮಾಣಕ್ಕೆ ತಮ್ಮಲ್ಲಿರುವ ಎಲ್ಲಾ ಒಡವೆಗಳನ್ನು ಅಡವಿಟ್ಟು ಹಳೆ ಮೈಸೂರು ಭಾಗದ ರೈತರಿಗೆ ನೆಮ್ಮದಿಯ ಬದುಕು ಕಟ್ಟಿಕೊಟ್ಟರು.ಆದರೆ ಈಗ ಇರುವ ಮಹಾರಾಜರು ಇದಕ್ಕೆ ತದ್ವಿರುದ್ಧವಾಗಿ ವರ್ತಿಸುತ್ತಿದ್ದಾರೆ. ಪರಿಹಾರವಾಗಿ ಸಾರ್ವಜನಿಕರಿಂದಲೇ ಹಣ ಪಡೆಯುತ್ತಿದ್ದಾರೆ. ಮೇ 17ರ ಒಳಗೆ ಟಿಡಿಆರ್ ನೀಡದಿದ್ದರೆ ನ್ಯಾಯಾಂಗ ನಿಂದನೆ ಎದುರಿಸುವಂತಹ ಪರಿಸ್ಥಿತಿಗೆ ರಾಜ್ಯ ಸರ್ಕಾರಕ್ಕೆ ತಂದೊಡ್ಡಿದ್ದಾರೆ. ಸರ್ಕಾರ ಅರಮನೆ ಮೈದಾನಕ್ಕೆ ಕೌಂಪೌಂಡ್ ಹಾಕಿದ್ದು,ಇನ್ನೂ ಪರಿಹಾರ ನೀಡಲಿಲ್ಲ ಎಂಬ ಅಂಶವನ್ನು ಸೇರಿಸಿದ್ದಾರೆ.ಇದು ಚುನಾವಣೆಯಲ್ಲಿ ನಿಂತಿರುವ ಮಹಾರಾಜರಿಗೆ ಶೋಭೆಯಲ್ಲ. ಈ ಕುರಿತು ಜನರು ಮತದಾನದ ದಿನ ತೀರ್ಮಾನ ಕೈಗೊಳ್ಳಲಿದ್ದರೆ ಎಂದು ಎಚ್ಚರಿಕೆಯನ್ನು ನೀಡಿದರು.
ಇದನ್ನೂ ಓದಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಶೇ 43% ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ
ಮಹಾರಾಜರ ಆಸ್ತಿಗೆ ನಾಲ್ಕು ಪಟ್ಟು ಹೆಚ್ಚು ಮೌಲ್ಯವನ್ನು ಕೊಡುವುದಾದರೆ ರಸ್ತೆ ಅಗಲೀಕರಣವಾಗದೆ ಹಲವು ವರ್ಷಗಳಿಂದ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರಿಗೆ ಉಂಟಾದ ಆರ್ಥಿಕ ನಷ್ಟವನ್ನು ಯಾರು ತುಂಬಿಕೊಡುತ್ತಾರೆ? ಮಹಾರಾಜರು ಸಂವೇದನೆಯಿಂದ ವರ್ತಿಸಬೇಕು.ಪ್ರಜೆಗಳ ಹಿತದೃಷ್ಟಿಯಿಂದ ಸರ್ಕಾರದಿಂದ ಒಂದು ರೂಪಾಯಿಯನ್ನು ಪಡೆಯದೆ ರಸ್ತೆ ವಿಸ್ತರಣೆಗೆ ಅನುವು ಮಾಡಿಕೊಡುವ ಮೂಲಕ ಸ್ಫೂರ್ತಿಯಾಗಬೇಕು ಎಂದರು.
ಮೈದಾನದ ಖಾಲಿ ಭೂಮಿ ವಶಕ್ಕೆ ತೆಗೆದುಕೊಳ್ಳಲು ಮೈಸೂರು ರಾಜ ವಂಶಸ್ಥರಿಗೆ ಸುಮಾರು ₹1,400 ಕೋಟಿ ಮೌಲ್ಯದಷ್ಟು ಟಿಡಿಆರ್ (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ನೀಡಲು ಒಪ್ಪಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣಗೊಂಡಿರುವುದು ಬೇಸರದ ಸಂಗತಿ.ರಾಜ್ಯ ಸರ್ಕಾರದ ನಡೆಯು ಮಹಾರಾಜರಿಗೆ ಒಂದು ನ್ಯಾಯ, ಪ್ರಜೆಗಳಿಗೆ ಒಂದು ನ್ಯಾಯ ಎಂಬ ಧೋರಣೆಯನ್ನು ಅನುಸರಿಸಿದಂತಾಗಲಿದೆ. ಈ ಕೂಡಲೇ ರಾಜ್ಯ ಸರ್ಕಾರ ಇಷ್ಟೊಂದು ಬೃಹತ್ ಮೊತ್ತವನ್ನು ನೀಡುವ ನಿರ್ಧಾರವನ್ನು ಕೈ ಬಿಟ್ಟು ಮಾನ್ಯ ನ್ಯಾಯಾಲಯದಲ್ಲಿ ಮೇಲ್ಬನವಿ ಸಲ್ಲಿಸುವ ಮೂಲಕ ತೆರಿಗೆದಾರರ ಹಣವನ್ನು ರಾಜಮನೆತನಕ್ಕೆ ಪೋಲಾಗುವುದನ್ನು ತಪ್ಪಿಸಬೇಕು, ಎಂದು ಜಗದೀಶ್ ವಿ. ಸದಂ ತಿಳಿಸಿದರು.
ಇದನ್ನೂ ಓದಿ :ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ, ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.