ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ-ಸಿಎಂ ಸಿದ್ದರಾಮಯ್ಯ

ಗೃಹಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿಯು ನೀರು ಬಿಡುವಂತೆ ನೀಡಿರುವ ಆದೇಶದ ಕುರಿತು ಸಂಪುಟ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸುದೀರ್ಘ ಚರ್ಚೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

Written by - Manjunath N | Last Updated : Jul 12, 2024, 06:31 PM IST
  • ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ
  • ಜೊತೆಗೆ ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ
  • ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು
ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ-ಸಿಎಂ ಸಿದ್ದರಾಮಯ್ಯ title=

ಬೆಂಗಳೂರು: ಗೃಹಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿಯು ನೀರು ಬಿಡುವಂತೆ ನೀಡಿರುವ ಆದೇಶದ ಕುರಿತು ಸಂಪುಟ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸುದೀರ್ಘ ಚರ್ಚೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು.

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ ಎಂದು ಸಿ.ಡಬ್ಲ್ಯೂ.ಆರ್.ಸಿ ಗೆ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಿ.ಡಬ್ಲ್ಯೂ.ಆರ್.ಸಿ ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಜೊತೆಗೆ ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು.

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು.ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು.

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎಂಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ. ಆದರೆ ತೀರ್ಪಿನಲ್ಲಿ ನಮ್ಮ ಮನವಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News