ಬೆಂಗಳೂರು: ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಕಲೆಕ್ಷನ್ ಮಾಡಿಕೊಡಲು ಹೇಳಿದ್ದಾರೆ. ಇವರು ಕರೆಪ್ಟ್ ಆಗಿದ್ದಾರೆ. ನಮಗೆ ಈಗ ಬಂದಿರುವ ವರದಿ ಪ್ರಕಾರ ಕಮೀಷನ್ ಕೇಳಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಕೆಲವು ಸಚಿವರು, ಪಿ ಡಬ್ಲು ಡಿ ಸಚಿವರು ನಮ್ಮ ಸಂಘಟನೆ ಒಡೆಯಲು ಪ್ರಯತ್ನ ಮಾಡಿದ್ದರು ಎಂದು ಹೇಳಿದ್ದಾರೆ.
ಇದನ್ನೂ ಓದಿ- ಎಸಿಬಿ ವಿಚಾರದಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ
ಇಂತಹ ಭ್ರಷ್ಟ ಸರ್ಕಾರವನ್ನು ನೋಡಿಲ್ಲ:
ಇದೇ ವೇಳೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ ಕೆಂಪಣ್ಣ ಅವರು, 3 ವರ್ಷಗಳಿಂದ ಬಿಲ್ ಬಾಕಿ ಇದೆ. 22 ಸಾವಿರ ಕೋಟಿ ರೂ. ಹಣ ಬಾಕಿ ಉಳಿದಿದೆ. ಇಂತಹ ಭ್ರಷ್ಟ ಸರ್ಕಾರ ನಾನು ಜೀವನದಲ್ಲಿ ನೋಡಿಯೇ ಇಲ್ಲ ಎಂದರು.
ಇದನ್ನೂ ಓದಿ- ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ.. ಸರ್ಕಾರದಿಂದ ಹೊರಬಂತು ಮಹತ್ವದ ಆದೇಶ
ಪ್ರತಿ ಭಾರಿಯೂ ನೀವು ಆಧಾರ ಇಲ್ಲದೆ ಆರೋಪ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ದಾಖಲೆ ಕೊಟ್ಟರೆ ಗುತ್ತಿಗೆದಾರರಿಗೆ ತೊಂದರೆ ಕೊಡ್ತಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಗೆ ಪತ್ರ ಬರೆಯುತ್ತೇವೆ ಹಾಗೂ ನ್ಯಾಯಯಾಂಗ ತನಿಖೆಗೆ ಆಗ್ರಹ ಮಾಡುತ್ತೇವೆ, ಅಲ್ಲಿ ದಾಖಲೆಗಳನ್ನ ನೀಡುತ್ತೇವೆ. ನಮ್ಮ ತಪ್ಪು ಇದ್ದರೆ ಶಿಕ್ಷೆ ಆಗಲಿ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.