ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನಗಳನ್ನು ಸಲ್ಲಿಸಲು ಹಾಗೂ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Sep 24, 2024, 03:38 PM IST
  • ಪ್ರಕರಣವು 01.08.2023 ರಿಂದ 31.07.2024 ರೊಳಗೆ ನಡೆದಿರಬೇಕು.
  • ದಿನಾಂಕ: 01.08.2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
  • ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10 ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ title=

ಮಡಿಕೇರಿ: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನಗಳನ್ನು ಸಲ್ಲಿಸಲು ಹಾಗೂ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2024ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗಾಗಿ “ಹೊಯ್ಸಳ ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಇದನ್ನೂ ಓದಿ:  ಅಣಬೆಯ ಸೇವನೆಯಿಂದ ತಟ್ಟನೆ ಇಳಿಕೆಯಾಗುವುದು ಶುಗರ್‌..ಒಮ್ಮೆ ಟ್ರೈ ಮಾಡಿ ಮಧುಮೇಹ ಚಿಂತೆಗೆ ಗುಡ್‌ ಬೈ ಹೇಳಿ

ಪ್ರಕರಣವು 01.08.2023 ರಿಂದ 31.07.2024 ರೊಳಗೆ ನಡೆದಿರಬೇಕು. ದಿನಾಂಕ: 01.08.2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10 ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಇದನ್ನೂ ಓದಿ: ಕ್ರಿಕೆಟ್‌ ನಿವೃತ್ತಿಯ ನಂತರ ಬೀದಿಗೆ ಬಿದ್ದ ಕ್ರಿಕೆಟಿಗರು! ಲಾರಿ ಡ್ರೈವರ್‌, ಸೇಲ್ಸ್‌ಮೆನ್‌ಗಳಾಗಿ ಜೀವನ ಸಾಗಿಸುತ್ತಿರುವ ಆಟಗಾರರಿವರು

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

ಮಕ್ಕಳ ದಿನಾಚರಣೆ-2024 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ (ದೂರವಾಣಿ 08272-224451) ಇವರಿಗೆ ಸೆಪ್ಟೆಂಬರ್, 27 ರೊಳಗೆ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News