'ಸಚಿವ ನಾಗೇಶ್ ಅವರ ಮನೆ ಮೇಲಿನ ದಾಳಿ ಹೇಡಿತನದ ಸಂಕೇತ'

`ಪಠ್ಯಪುಸ್ತಕ ಮರುಪರಿಷ್ಕರಣೆಯನ್ನು ಬೌದ್ಧಿಕವಾಗಿ ಎದುರಿಸಲಾಗದ ಕಾಂಗ್ರೆಸ್ ಪಕ್ಷದ ಭಟ್ಟಂಗಿಗಳು ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ನಿವಾಸದ ಮೇಲೆ ದಾಳಿ ನಡೆಸಿರುವುದು ಹೇಡಿತನ ಮತ್ತು ಅವಿವೇಕದ ಪರಮಾವಧಿ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಖಂಡಿಸಿದ್ದಾರೆ.

Written by - Prashobh Devanahalli | Edited by - Manjunath N | Last Updated : Jun 1, 2022, 10:52 PM IST
  • ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು,`ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ ಕಾರ್ಯಕರ್ತರು ತಮ್ಮನ್ನು ತಾವು ಕುವೆಂಪು ಆರಾಧಕರು ಎಂದು ಹೇಳಿದ್ದಾರೆ.
  • ಆದರೆ, ಸಚಿವರ ಮನೆ ಮೇಲೆ ದಾಳಿ ಮಾಡುವ ಮೂಲಕ ಮಹಾಕವಿಯ ತತ್ವಗಳಿಗೆ ಮಸಿ ಬಳಿದಿದ್ದಾರೆ.
'ಸಚಿವ ನಾಗೇಶ್ ಅವರ ಮನೆ ಮೇಲಿನ ದಾಳಿ ಹೇಡಿತನದ ಸಂಕೇತ' title=
file photo

ಬೆಂಗಳೂರು: `ಪಠ್ಯಪುಸ್ತಕ ಮರುಪರಿಷ್ಕರಣೆಯನ್ನು ಬೌದ್ಧಿಕವಾಗಿ ಎದುರಿಸಲಾಗದ ಕಾಂಗ್ರೆಸ್ ಪಕ್ಷದ ಭಟ್ಟಂಗಿಗಳು ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ನಿವಾಸದ ಮೇಲೆ ದಾಳಿ ನಡೆಸಿರುವುದು ಹೇಡಿತನ ಮತ್ತು ಅವಿವೇಕದ ಪರಮಾವಧಿ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಖಂಡಿಸಿದ್ದಾರೆ.

ಇದನ್ನೂ ಓದಿ: ಜೂನ್‌ನಲ್ಲಿ OTTಯಲ್ಲಿ ರಿಲೀಸ್‌ ಆಗಲಿರುವ ಸಿನಿಮಾ, ವೆಬ್ ಸಿರೀಸ್ ಲಿಸ್ಟ್ ಇಲ್ಲಿದೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು,`ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ ಕಾರ್ಯಕರ್ತರು ತಮ್ಮನ್ನು ತಾವು ಕುವೆಂಪು ಆರಾಧಕರು ಎಂದು ಹೇಳಿದ್ದಾರೆ. ಆದರೆ, ಸಚಿವರ ಮನೆ ಮೇಲೆ ದಾಳಿ ಮಾಡುವ ಮೂಲಕ ಮಹಾಕವಿಯ ತತ್ವಗಳಿಗೆ ಮಸಿ ಬಳಿದಿದ್ದಾರೆ. ಇಂತಹ ಗೂಂಡಾಗಿರಿಯನ್ನು ಸರಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ನಿಶ್ಚಿತ’ ಎಂದು ಖಾರವಾಗಿ ನುಡಿದಿದ್ದಾರೆ.

ಇದನ್ನೂ ಓದಿ: ಛತ್ರಪತಿ ಶಿವಾಜಿ ಆಗ್ತಾರಾ ರಾಕಿಂಗ್‌ ಸ್ಟಾರ್‌ ಯಶ್‌! ವೈರಲ್‌ ಆಗ್ತಿರುವ ಪೋಸ್ಟರ್‌ ಅಸಲಿಯತ್ತೇನು?

`ಕಾಂಗ್ರೆಸ್ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನೇ ನಾಶ ಮಾಡಿ, ಗುಲಾಮಗಿರಿಯನ್ನು ಬೆಳೆಸಿದೆ. ಸ್ವತಂತ್ರ ಆಲೋಚನೆ ಇರುವವರಾರೂ ದಾಳಿಯಂಥ ಅನಾಗರಿಕ ಕೃತ್ಯಗಳಿಗೆ ಮುಂದಾಗುವುದಿಲ್ಲ. ಇದು ಕಾಂಗ್ರೆಸ್ಸಿನ ಸಾಂಸ್ಕೃತಿಕ, ಬೌದ್ಧಿಕ ಮತ್ತು ನೈತಿಕ ದಿವಾಳಿತನವನ್ನು ಎತ್ತಿ ತೋರಿಸುತ್ತದೆ. ಆದರೆ, ಇಂತಹ ಕೀಳು ತಂತ್ರಗಳಿಂದ ಬಿಜೆಪಿ ಸರಕಾರದ ಸ್ಥೈರ್ಯವನ್ನು ಕುಗ್ಗಿಸಲು ಎಂದಿಗೂ ಸಾಧ್ಯವಿಲ್ಲ. ಏಕೆಂದರೆ, ಕಾಂಗ್ರೆಸ್ ಪಕ್ಷವನ್ನು ದೇಶದ ಜನ ಈಗಾಗಲೇ ಕಸದ ಬುಟ್ಟಿಗೆ ಎಸೆದಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

`ನಾಗೇಶ್ ಅವರ ಮನೆಯ ಮೇಲೆ ಮಾಡಿರುವ ದಾಳಿಯು ಅಸಹಿಷ್ಣುತೆಯ ಸಂಕೇತವಾಗಿದೆ.ಅಭಿವ್ಯಕ್ತಿ ಸ್ವಾತಂತ್ರ್ಯ, ವೈಚಾರಿಕ ಸ್ವಾತಂತ್ರ್ಯಗಳ ಬಗ್ಗೆ ಬಿಜೆಪಿ ಬಗ್ಗೆ ಅನಗತ್ಯವಾಗಿ ಗೂಬೆ ಕೂರಿಸುತ್ತಿರುವ ಸಾಹಿತಿಗಳು ಈಗ ಜಾಣಮೌನಕ್ಕೆ ಜಾರಿರುವುದು ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್ ತಾನು ಅಧಿಕಾರದಲ್ಲಿಲ್ಲದಿದ್ದಾಗ ಹೆಚ್ಚು ಅಪಾಯಕಾರಿ ಎನ್ನುವ ವಾಜಪೇಯಿಯವರ ಮಾತು ನಿಜವೆಂದು ಇದರಿಂದ ಸಾಬೀತಾಗಿದೆ’ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

 

 

 

Trending News