ಬೆಂಗಳೂರು: ಬೆಂಗಳೂರಿನ ಬಸವನಗುಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೃಹತ್ ಮೊತ್ತದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
116 ಕೆಜಿ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ಸಂಬಂಧ ನಾಗರಾಜ್ ಮತ್ತು ನೋಗರಾಜ್ ಎಂಬುವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ದಾಸರಹಳ್ಳಿ ವಲಯ: ವಿವಿಧ ಸ್ಥಳಗಳ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಆರೋಪಿಗಳಿಂದ ವಶಪಡಿಸಿಕೊಂಡಿರುವ 116 ಕೆಜಿ ಗಾಂಜಾದ ಮೌಲ್ಯ ಮಾರುಕಟ್ಟೆಯಲ್ಲಿ 44 ಲಕ್ಷ ರೂ. ಎಂದು ತಿಳಿದುಬಂದಿದೆ. ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಖಾಕಿಪಡೆ ಯಶಸ್ವಿಯಾಗಿದೆ.
ವಿಶಾಖಪಟ್ಟಣದಿಂದ ಗಾಂಜಾ ತರಿಸಿ ಮಾರಾಟ ಮಾಡಲು ಆರೋಪಿಗಳು ಪ್ಲ್ಯಾನ್ ಮಾಡಿದ್ದರು. ಬಂಧಿತರಿಂದ ಹಣ, ಗಾಂಜಾ, 2 ಮೊಬೈಲ್ ಪೋನ್‍ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ತಾಕತ್ ಇದ್ದರೆ ನನ್ನ ವಿರುದ್ಧದ ಆರೋಪದ ಬಗ್ಗೆ ತನಿಖೆ ನಡೆಸಿ: ಮಾಜಿ ಸಿಎಂ ಸಿದ್ದರಾಮಯ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.