ಬೆಂಗಳೂರು : ನಮ್ಮ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಿ ಅದರ ತೀರ್ಪಿನ ಅನ್ವಯ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಬಿಜೆಪಿ ಕುತಂತ್ರ ಖಂಡಿಸಿ ಇಂದು ಮಧ್ಯಾಹ್ನ 3 ಗಂಟೆಗೆ ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರೆಲ್ಲ ಪ್ರತಿಭಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ರಾಹುಲ್ ಗಾಂಧಿ ಅವರ ರಾಜಕೀಯ ಬೆಳವಣಿಗೆ ತಡೆಯಲು ಬಿಜೆಪಿ ಕುತಂತ್ರ ನಡೆಸಿದ್ದು, ಇದನ್ನು ನಾವು ಖಂಡಿಸುತ್ತೇವೆ. ರಾಹುಲ್ ಗಾಂಧಿ ಅವರು ದೇಶದ ಬಡವರ ಧ್ವನಿಯಾಗಿ, ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಹೋರಾಟ ಮಾಡುತ್ತಿದ್ದು, ಈ ಹೋರಾಟ ಹತ್ತಿಕ್ಕುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ: 85,000 ಕೋಟಿ ಸಾಲ ಎತ್ತಲು ಬಜೆಟ್ ಗಾತ್ರ ಹಿಗ್ಗಿಸಿದ ಸರ್ಕಾರ : ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್
ದೇಶದ ಐಕ್ಯತೆ ಸಮಗ್ರತೆ ಹಾಗೂ ಶಾಂತಿ ಸ್ಥಾಪನೆಗೆ ಭಾರತ ಒಗ್ಗೂಡಿಸಲು ಮುಂದಾಗಿರುವ ನಮ್ಮ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಸಂಚು ರೂಪಿಸುತ್ತಿದೆ. ದೇಶದ ಎಲ್ಲಾ ವಿರೋಧ ಪಕ್ಷದ ನಾಯಕರು ರಾಹುಲ್ ಗಾಂಧಿ ಅವರ ಬೆನ್ನಿಗೆ ನಿಲ್ಲುತ್ತೇವೆ. ರಾಹುಲ್ ಗಾಂಧಿ ಅವರ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಜನ ಸೂಕ್ತ ಉತ್ತರ ನೀಡುತ್ತಾರೆ.
ಮೈಸೂರು, ಬೆಳಗಾವಿ, ಧಾರವಾಡ ಸೇರಿದಂತೆ ವಿಭಾಗೀಯ ಕೇಂದ್ರಗಳಲ್ಲಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡುತ್ತಿದ್ದೇನೆ. ಬೆಂಗಳೂರು ಕಾರ್ಯಕರ್ತರು ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಲು ತಿಳಿಸಿದ್ದೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾವ ವಿಚಾರ ಚರ್ಚೆ ಆಗಿದೆ ಎಂಬ ಪ್ರಶ್ನೆಗೆ, "ನಾವು ಚುನಾವಣೆಗೂ ಮುನ್ನ ನೀಡಿರುವ ಗ್ಯಾರಂಟಿ ಯೋಜನೆಗಳ ಜಾರಿಗೆ ಪಣ ತೊಟ್ಟಿದ್ದೇವೆ. ಈಗಾಗಲೇ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ.
ಇದನ್ನೂ ಓದಿ: ಎಲ್ಲೊ ಬೋರ್ಡ್ ಚಾಲಕರ ಮಕ್ಕಳಿಗೆ ವಿದ್ಯಾನಿಧಿ..!
ಜುಲೈ 14ರಿಂದ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಆರಂಭಿಸಲಾಗುವುದು. ನಾವು ಐದು ಗ್ಯಾರಂಟಿ ಯೋಜನೆಗಳನ್ನು ಈ ವರ್ಷವೇ ಜಾರಿ ಮಾಡುತ್ತೇವೆ. ನಮ್ಮ ಕಾರ್ಯಕರ್ತರು ಜನರಿಗೆ ಎಲ್ಲಾ ಯೋಜನೆಗಳ ಬಗ್ಗೆ ತಿಳಿಸಬೇಕು. ನಮ್ಮ ಯೋಜನೆಗಳು ಎಲ್ಲಾ ಜಾತಿ, ಧರ್ಮ, ವರ್ಗದವರಿಗೆ ತಲುಪಬೇಕು. ವಿಧಾನಸಭೆ ಹಾಗೂ ಪರಿಷತ್ ನಲ್ಲಿ ನಮ್ಮ ಯೋಜನೆಗಳಿಗೆ ಬಿಜೆಪಿ ನಾಯಕರು ಪ್ರಚಾರ ನೀಡುತ್ತಿರುವುದಕ್ಕೆ ಧನ್ಯವಾದಗಳು. ನಮ್ಮ ಕೈಯಲ್ಲಿ ಮಾಡಲಾಗದ ಕೆಲಸ ಇವರು ಮಾಡುತ್ತಿದ್ದಾರೆ ಎಂದು ಸಂತೋಷದಿಂದ ಕೆಲವು ಸಲಹೆ ನೀಡುತ್ತಿದ್ದಾರೆ" ಎಂದು ತಿಳಿಸಿದರು.
ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಕೇಳಿದಾಗ, "ಅಣ್ಣ ತಮ್ಮನ ಬಗ್ಗೆ ಮಾತನಾಡದೆ ಬೇರೆ ಯಾರ ಬಗ್ಗೆ ಮಾತನಾಡುತ್ತಾರೆ? ನನ್ನ ಮೇಲೆ ಅವರಿಗೆ ಪ್ರೀತಿ ಹೆಚ್ಚು. ಹೀಗಾಗಿ ಮಾತನಾಡುತ್ತಾರೆ. ಮಾತನಾಡಲಿ ನಾನು ಬಹಳ ಸಂತೋಷದಿಂದ ಅವರ ಮಾತನ್ನು ಸ್ವೀಕರಿಸುತ್ತೇನೆ. ಅವರ ದೊಡ್ಡ ಅನುಭವ, ಜ್ಞಾನ ಭಂಡಾರವನ್ನು ನನ್ನ ಬದುಕಿನಲ್ಲಿ ಅಳವಡಿಸಿಕೊಳ್ಳುತ್ತೇನೆ" ಎಂದು ತಿಳಿಸಿದರು.
ಇದನ್ನೂ ಓದಿ: ಬಜೆಟ್ ಮೂಲಕ ಪ್ರವಾಸೋದ್ಯಮಕ್ಕೆ ಹೊಸ ಕಾಯಕಲ್ಪ ನೀಡಲು ರಾಜ್ಯ ಸರ್ಕಾರ 'ಸಿದ್ದ' ಹಸ್ತ
ಕುಮಾರಸ್ವಾಮಿ ಅವರು ತೋರಿಸಿರುವ ಪೆನ್ ಡ್ರೈವ್ ಬಗ್ಗೆ ಕೇಳಿದ ಪ್ರಶ್ನೆಗೆ, "ನಾವು ಬಹಳಷ್ಟು ಡ್ರೈವ್ ನೋಡಿದ್ದೇವೆ. ನಾನು ಕಿವಿಯಲ್ಲಿ ಕೇಳಿದ್ದನ್ನು ನಂಬುವುದಿಲ್ಲ. ಕಣ್ಣಾರೆ ನೋಡಿದ್ದನ್ನು ಮಾತ್ರ ನಂಬುತ್ತೇನೆ. ಅವರ ಬಳಿ ದಾಖಲೆ ಇದ್ದರೆ ಬಹಿರಂಗ ಪಡಿಸಲಿ" ಎಂದು ತಿಳಿಸಿದರು. ಆಪರೇಶನ್ ಕಮಲದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಆಯಿತೇ ಎಂದು ಕೇಳಿದಾಗ, "ಇಲ್ಲದಿರುವ ವಿಚಾರ ಸೃಷ್ಟಿಸಬೇಡಿ. ಜನರೇ ಈಗಾಗಲೇ ಆಪರೇಶನ್ ಮಾಡಿದ್ದಾರೆ" ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.