ಚಾಮರಾಜನಗರ: ಕಾವೇರಿಯ ಹೊರಹರಿವು ಹೆಚ್ಚುತ್ತಿದ್ದಂತೆ ರಾಜ್ಯದ ಗಡಿಯಲ್ಲಿರುವ ಪ್ರಸಿದ್ಧ ಹೊಗೆನಕಲ್ ಜಲಪಾತ ಮತ್ತು ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದೆ. ಕಬಿನಿ ಮತ್ತು ಕೆಆರ್‌ಎಸ್ ಆಣೆಕಟ್ಟೆಯಿಂದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಭೋರ್ಗರೆದು ಧುಮ್ಮಿಕುತ್ತಿದೆ.
ಇದನ್ನೂ ಓದಿ: PHOTOS: ಎಚ್.ಡಿ.ಕೋಟೆಯಲ್ಲಿ ಹುಲಿ ಹಿಡಿಯಲು ಬಂದ ಗಜಪಡೆ
ಹಾಲಿನ ನೊರೆಯಂತೆ ಧುಮ್ಮುಕ್ಕುತ್ತಿರುವ ಭರಚುಕ್ಕಿ ವೈಭವ ರುದ್ರ ರಮಣೀಯವಾಗಿದ್ದು ಜಲಧಾರೆಯನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮಳೆಯ ನಡುವೆಯೂ ಬರುತ್ತಿದ್ದಾರೆ. ಇನ್ನು, ಕರ್ನಾಟಕದ ಗಡಿಯಲ್ಲಿರುವ ಭಾರತದ ನಯಾಗರ ಎಂದೇ ಕರೆಯುವ ಹೊಗೆನಕಲ್ ಜಲಪಾತ ಭೋರ್ಗರೆದು ಧುಮ್ಮಿಕುತ್ತಿದ್ದು ಅಪರೂಪದ ದೃಶ್ಯ ಕಾವ್ಯವೇ ರೂಪುಗೊಂಡಿದೆ. ಸದ್ಯಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶವಿದ್ದು ಕಳೆದ ಬಾರಿಯಂತೆ ಹೆಚ್ಚು ನೀಡು ಉಕ್ಕಿ ಬಂದರೆ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ.
ತುಂಬಿ ಹರಿಯುತ್ತಿದೆ ಗಗನಚುಕ್ಕಿ ಜಲಪಾತ:
ಇನ್ನೊಂದೆಡೆ ಕೆಆರ್‌ಎಸ್ ಮತ್ತು ಕಬಿನಿ ಡ್ಯಾಂನಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಗಗನಚುಕ್ಕಿ ಜಲಪಾತವೂ ಸಹ ಮೈದುಂಬಿಕೊಂಡು ಬೋರ್ಗರೆಯುತ್ತಿದೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತ ನೋಡಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಇನ್ನು ಪ್ರಕೃತಿಯ ವೈಭವದ ರುದ್ರ ರಣಮೀಯ ದೃಶ್ಯಕ್ಕೆ ಗಗನಚುಕ್ಕಿ ಜಲಪಾತ ಸಾಕ್ಷಿಯಾಗುತ್ತಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿರುವ ಗಗನಚುಕ್ಕಿ ಜಲಪಾತವು ನೋಡುಗರ ಮನಸೆಳೆಯುತ್ತಿದೆ.
ಇದನ್ನೂ ಓದಿ: ಅಬ್ಬಬ್ಬಾ... ಒಂದಲ್ಲ, ಎರಡಲ್ಲ ಬರೋಬ್ಬರಿ 27 ಮಂದಿ ಒಂದೇ ಆಟೋದಲ್ಲಿ ಪ್ರಯಾಣ!
ಮುಳುಗಡೆ ಹಂತ ತಲುಪಿದ ವೆಲ್ಲೆಸ್ಲಿ ಸೇತುವೆ:
ಜೊತೆಗೆ ಕಾವೇರಿ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತ ತಲುಪಿದೆ. ವೆಲ್ಲೆಸ್ಲಿ ಸೇತುವೆ ಬಳಿ ಅಪಾಯದ ಮಟ್ಟದಲ್ಲಿ ಕಾವೇರಿ ನದಿ ನೀರು ಹರಿಯುತ್ತಿದೆ. ಟಿಪ್ಪು ಕಾಲದಲ್ಲಿ ನಿರ್ಮಾಣವಾಗಿದ್ದ ಇತಿಹಾಸ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ ಇಂದು ಭಾರೀ ಮಳೆಯಿಂದ ಮುಳುಗಡೆಯಾಗುವ ಸ್ಥಿತಿಗೆ ತಲುಪಿದೆ. ಇನ್ನು ಈ ಸೌಂದರ್ಯ ವೀಕ್ಷಣೆಗೆಂದು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇನ್ನು 1 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ವೆಲ್ಲೆಸ್ಲಿ ಬ್ರಿಡ್ಜ್ ಬಹುತೇಕ ಮುಳುಗಡೆಯಾಗಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ