ಬೆಂಗಳೂರು: ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್ಐಆರ್ ಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಇದರಿಂದಾಗಿ ಬಿಎಸ್ ವೈಗೆ ಬಿಗ್ ರಿಲೀಫ್ ದೊರೆತಂತಾಗಿದೆ.
ಡಿನೋಟಿಫಿಕೇಷನ್ ಸಂಬಂಧ ಎಸಿಬಿ ದಾಖಲಿಸಿದ್ದ ಎರಡು ಎಫ್ಐಆರ್ ಗೆ ಹೈಕೋರ್ಟ್ ನ್ಯಾ.ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ಪೀಠದಿಂದ ಮಧ್ಯಂತರ ತಡೆ ಆದೇಶ ಹೊರಬಿದ್ದಿದೆ.
ಎಫ್ಐಆರ್ ದಾಖಲಿಸಲು ವಿಳಂಬ ಮಾಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಭೀತುಮಾಡುವ ದಾಖಲೆಗಳಿಲ್ಲ. ಒಂದೇ ದೂರಿನಲ್ಲಿ ಎರಡು ಎಫ್ಐಆರ್ ದಾಖಲಿಸುವುದು ಕಾನೂನು ಬಾಹಿರ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ದೂರು ದಾಖಲಾಗಿದೆ. ಡಿನೋಡಿಫೈ ಲಾಭ ಮಾಡಿ ಲಾಭ ಮಾಡಿಕೊಂಡಿರುವ ಬಗ್ಗೆ ಸೂಕ್ತ ಸಾಕ್ಷ್ಯಗಳಿಲ್ಲ ಎಂಬ ಅಂಶಗಳನ್ನು ಆಧರಿಸಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.