ಬೆಂಗಳೂರು: ಕೆಟ್ಟು ನಿಂತಿದ್ದ ಬೈಕ್ ರಿಪೇರಿ ಮಾಡಿಸಲು ಮೆಕ್ಯಾನಿಕ್ ಕರೆತರುವಷ್ಟರಲ್ಲಿ ಮಿಂಚಿನಂತೆ ಬೈಕ್ ಕಳ್ಳತನ ಮಾಡಿದ್ದ ಆರೋಪಿ(Bike Thief Arrested)ಯನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಸಯ್ಯದ್ ಮಜರ್ ಎಂಬಾತನ್ನು ಬಂಧಿಸಿ 5.5 ಲಕ್ಷ ರೂ. ಮೌಲ್ಯದ 5 ಬೈಕ್ ಹಾಗೂ ಒಂದು ಆಟೊ ಜಪ್ತಿ ಮಾಡಿಕೊಳ್ಳಲಾಗಿದೆ. ಜನವರಿ ತಿಂಗಳ 4ರಂದು ರಾತ್ರಿ ವ್ಯಕ್ತಿಯೊಬ್ಬರು ಚಂದ್ರಾಲೇಔಟ್ ಠಾಣಾ(Chandra Layout Police Station) ವ್ಯಾಪ್ತಿಯಲ್ಲಿ ಹೋಗುವಾಗ ಬೈಕ್ ರಸ್ತೆಯಲ್ಲೇ ಕೆಟ್ಟು ನಿಂತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: "ನಾರಾಯಣ ಗುರುಗಳ ಸ್ತಬ್ಧಚಿತ್ರ ವಿಚಾರದಲ್ಲಿ ಕೇರಳದ ಸಿಪಿಐಎಂ ಪಕ್ಷವನ್ನು ಪ್ರಶ್ನಿಸಬೇಕು, ಕೇಂದ್ರವನ್ನಲ್ಲ"
ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮನೆಗೆ ಹೋಗಿ ಮಾರನೇ ದಿನ ಬರುವಾಗ ಬೈಕ್(Two Wheelers Bike) ಕಳ್ಳತನವಾಗಿತ್ತು. ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ವಿರುದ್ಧ ಬ್ಯಾಟರಾಯನಪುರ, ಕೆಂಗೇರಿ, ಹೊಸಕೋಟೆ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು(Bengaluru Police) ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬಹುತೇಕ ಸ್ಥಗಿತದ ಹಂತಕ್ಕೆ ಬಂದಿದೆ ದೇಶದ ಏಕೈಕ ಕನ್ನಡ ವಿವಿ, ಆದರೆ ಸಂಸ್ಕೃತ ವಿವಿಗೆ ಮಾತ್ರ ಅನುದಾನ!?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.